ಮೇಯರ್ ಚುನಾವಣೆ ವಿಚಾರದಲ್ಲಿ ನೋಟಿಸ್ ಬಂದರೆ ಉತ್ತರಿಸುತ್ತೇನೆ: ಶಾಸಕ ತನ್ವೀರ್ ಸೇಠ್

Update: 2021-02-26 18:22 GMT

ಮೈಸೂರು,ಫೆ.26: ಪಾಲಿಕೆ ಮೇಯರ್ ಆಯ್ಕೆ ಚುನಾವಣೆ ವಿಚಾರದಲ್ಲಿ ನೋಟಿಸ್ ಬಂದರೆ ಉತ್ತರಿಸಲು ಸಿದ್ಧನಾಗಿದ್ದೇನೆ ಎಂದು ಶಾಸಕ ತನ್ವೀರ್ ಸೇಠ್ ತಿಳಿಸಿದರು.

ನಗರದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾನತಾಡಿದ ಅವರು, ನಾನು ರಾಜಕಾರಣಕ್ಕೆ ಬಂದದ್ದು ನಿನ್ನೆ ಮೊನ್ನೆಯಲ್ಲ. ಐದು ಬಾರಿ ಶಾಸಕನಾಗಿ ಕೆಲಸ ಮಾಡಿದ್ದೇನೆ. ಮೇಯರ್ ಆಯ್ಕೆ ವಿಚಾರದಲ್ಲಿ  ಕೊನೇ ಗಳಿಕೆಯಲ್ಲಿ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರನ್ನು ಕೇಳಿಯೇ ನಿರ್ಧಾರ ತೆಗೆದುಕೊಂಡಿದ್ದೇನೆ. ಹೈಕಮಾಂಡ್‍ನಿಂದ ನೋಟಿಸ್ ಬರುತ್ತದೆಯೋ, ಇಲ್ಲವೋ ಗೊತ್ತಿಲ್ಲ. ಬಂದರೆ ಎಲ್ಲದಕ್ಕೂ ಉತ್ತರಿಸುತ್ತೇನೆ. ಸ್ಥಳೀಯವಾಗಿ ಕಾಂಗ್ರೆಸ್ ಉಳಿಸುವ ನಿರ್ಧಾರ ಇದು. ಅದು ಹೇಗೆ ವಿವಾದವಾಯಿತೋ ಗೊತ್ತಿಲ್ಲ ಎಂದರು.

ಮೈಸೂರು ಮಹಾನಗರ ಪಾಲಿಕೆಯಲ್ಲಿ ಕೊನೆ ಕ್ಷಣದಲ್ಲಿ ಜೆಡಿಎಸ್‍ನೊಂದಿಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಮೇಯರ್ ಸ್ಥಾನವನ್ನು ಜೆಡಿಎಸ್‍ಗೆ ಬಿಟ್ಟುಕೊಟ್ಟಿತ್ತು. ಆದರೆ, ಇದಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಹೈಕಮಾಂಡ್ ಒಪ್ಪಿಗೆ ನೀಡಿರಲಿಲ್ಲ ಎನ್ನಲಾಗಿದೆ. ಈ ಕಾರಣಕ್ಕಾಗಿ ಕೆಪಿಸಿಸಿ ವತಿಯಿಂದ ಶಾಸಕ ತನ್ವೀರ್ ಸೇಠ್ ಸೇರಿ ಮೈಸೂರು ಭಾಗದ ನಾಯಕರಿಗೆ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಹೇಳಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News