ದಿಲ್ಲಿ ಫ್ಯಾಕ್ಟರಿಯಲ್ಲಿ ಅಗ್ನಿ ಅನಾಹುತ: ಓರ್ವ ಮೃತ್ಯು

Update: 2021-02-27 04:40 GMT
ಸಾಂದರ್ಭಿಕ ಚಿತ್ರ 

ಹೊಸದಿಲ್ಲಿ: ದಿಲ್ಲಿಯ ಪ್ರತಾಪ್ ನಗರ ಪ್ರದೇಶದಲ್ಲಿ ಶನಿವಾರ ಪ್ಲಾಸ್ಟಿಕ್ ಹಾಗೂ ನೈಲ್ ಪಾಲಿಶ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭಾರೀ ಅಗ್ನಿ ಅನಾಹುತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ.

ಅಗ್ನಿಶಾಮಕ ದಳದ ಸಿಬ್ಬಂದಿಗಳು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ನಾವು ಬೆಂಕಿಯನ್ನು ತಹಬಂದಿಗೆ ತಂದಿದ್ದೇವೆ ಎಂದು ಅಧಿಕಾರಿಗಳು ಸುದ್ದಿಸಂಸ್ಥೆ ಎಎನ್ ಐಗೆ ತಿಳಿಸಿದ್ದಾರೆ.

ಬೆಳಗ್ಗಿನಜಾವ 3:47ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಮೃತದೇಹವು ಕಟ್ಟಡದ ಮೊದಲ ಮಹಡಿಯಲ್ಲಿ ಕಂಡುಬಂದಿದೆ.

ಅಗ್ನಿನಂದಿಸಲು 28 ಅಗ್ನಿಶಾಮಕ ಯಂತ್ರಗಳನ್ನು ಬಳಸಲಾಗಿತ್ತು.

ಪ್ರತ್ಯಕ್ಷದರ್ಶಿಗಳ ಪ್ರಕಾರ ಎಲ್ ಪಿಜಿ ಸಿಲಿಂಡರ್ ಸ್ಫೋಟಗೊಂಡ ಬಳಿಕ ಬೆಂಕಿ ಹತ್ತಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News