ಫಲಾಹ್ ಕಾಲೇಜಿನಲ್ಲಿ ಅಭಿನಂದನಾ ಕಾರ್ಯಕ್ರಮ

Update: 2021-02-27 08:05 GMT

ಮಂಗಳೂರು : ಪದವಿ ಪೂರ್ವ ಕಾಲೇಜು ಶಿಕ್ಷಣ ಇಲಾಖೆ 2019- 2020 ಶೈಕ್ಷಣಿಕ  ಸಾಲಿನಲ್ಲಿ ನಡೆಸಿದ ದ್ವಿತೀಯ ಪಿ.ಯು ಪರೀಕ್ಷೆಯಲ್ಲಿ ಸತತ ಮೂರನೇ ಬಾರಿಗೆ ಶೇ 100 ಫಲಿತಾಂಶ ದಾಖಲಿಸಿದ ತಲಪಾಡಿ ಕೆ.ಸಿ ರೋಡ್ ವಿದ್ಯಾನಗರ ಫಲಾಹ್ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಿಗೆ ಹಾಗೂ ಪ್ರಾಂಶುಪಾಲರಿಗೆ ಮತ್ತು ಉಪನ್ಯಾಸಕರಿಗೆ ಫಲಾಹ್ ಎಜ್ಯುಕೇಶನ್ ಸೊಸೈಟಿ ವತಿಯಿಂದ ಅಭಿನಂದನಾ ಕಾರ್ಯಕ್ರಮ ಜರುಗಿತು.

ಫಲಾಹ್ ಎಜ್ಯುಕೇಷನ್ ಸೊಸೈಟಿ ಉಪಾಧ್ಯಕ್ಷ ಹಾಜಿ ಯು. ಬಿ ಮೊಹಮ್ಮದ್ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಪ್ರಾಂಶುಪಾಲರಾದ ಅಬ್ದುಲ್ ಖಾದರ್ ಹುಸೈನ್ ಪಡುಬಿದ್ರೆ ಪ್ರಾಸ್ತವಿಕವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಶೈಕ್ಷಣಿಕ ವರ್ಷ 100 ಗಂಟೆಗಳ ಸ್ಪೋಕನ್ ಇಂಗ್ಲೀಷ್ ಕೊರ್ಸ್, ಕಾಲೇಜು ಚಟುವಟಿಕೆಗಳ ವಿವಿಧ ಸಂಘದ ಉದ್ಘಾಟನೆ ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಝುನೈರಾ ಅವರ ಪದಗ್ರಹಣ ಕಾರ್ಯಕ್ರಮ ಜರುಗಿತು.

ವೇದಿಕೆಯಲ್ಲಿ ಸಂಸ್ಥೆಯ ಕೋಶಾಧಿಕಾರಿ ಹಾಜಿ ಅಬ್ಬಾಸ್ ಮಜಲ್, ಜೊತೆ ಕಾರ್ಯದರ್ಶಿ ಟಿ ಎಂ ಬಶೀರ್, ಆಡಳಿತಾಧಿಕಾರಿ ಮೊಹಮ್ಮದ್ ಹನೀಫ್, ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಆಯಿಶಾ ಸಬೀನಾ ಕೈಸಿರಾನ್, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ವಿದ್ಯಾ ಡಿಸೋಜ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿನಿಯರಾದ ಶಫೀಕಾ ಸನಾ ಸ್ವಾಗತಿಸಿದರು. ಮೆಹರೂಫ ವಂದಿಸಿದರು. ಅಂಬ್ರಿಝ, ಮುಬೀನಾ ಬಾನು, ಹಕೀಫ ಪ್ರತಿಭಾನ್ವಿತರ ಪಟ್ಟಿಯನ್ನು ವಾಚಿಸಿದರು. ಕ್ಷಮ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News