ಮಂಗಳೂರು: ಸ್ಕೂಟರ್‌ನಲ್ಲಿ ತೆರಳಿ ದಾಳಿ ನಡೆಸಿದ ಪೊಲೀಸ್ ಅಧಿಕಾರಿ; ಅಕ್ರಮ ಮರಳು ಸಾಗಾಟದ ಲಾರಿ ವಶಕ್ಕೆ

Update: 2021-02-27 10:29 GMT
ಸಾಂದರ್ಭಿಕ ಚಿತ್ರ

ಮಂಗಳೂರು: ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಆರೋಪದಲ್ಲಿ ಲಾರಿಯನ್ನು ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ಮತ್ತು ಡಿಸಿಪಿ ಹರಿರಾಮ್ ಅವರು ಸ್ಕೂಟರ್ ನಲ್ಲಿ ತೆರಳಿ ವಶಕ್ಕೆ ಪಡೆದಿದ್ದಾರೆ.

ಮರಳು ಸಾಗಾಟದ ಲಾರಿಯನ್ನು ತಲಪಾಡಿ ಟೋಲ್ ಗೇಟಿನಲ್ಲಿ ತಡೆದ ಅಧಿಕಾರಿಗಳು, ಲಾರಿ ಚಾಲಕನನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿಸಿದ್ದಾರೆ.

ಸೋಮೇಶ್ವರ ಸಮುದ್ರ ತೀರದಿಂದ ಮರಳು ಸಾಗಾಟ ನಡೆಸುತ್ತಿದ್ದ ಲಾರಿಗೆ ಎಸ್ಕಾರ್ಟ್ ನೀಡುತ್ತಿದ್ದ ವಾಹನಗಳನ್ನು ಜಪ್ತಿ ಮಾಡಿದ್ದು, ಎಸ್ಕಾರ್ಟ್ ನಡೆಸುತ್ತಿದ್ದ ಚಂದ್ರ ಎಂಬಾತನನ್ನು ವಶಕ್ಕೆ ಪಡೆದಿರುವುದಾಗಿ ಮಾಹಿತಿ ನೀಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News