ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ

Update: 2021-02-27 13:14 GMT

ಬೆಂಗಳೂರು, ಫೆ.27: ರಾಜ್ಯ ಸರಕಾರವು ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಶನಿವಾರ ಆದೇಶ ಹೊರಡಿಸಿದೆ.

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‍ರಾಜ್ ಇಲಾಖೆಯ(ಇ-ಗೌವರ್ನೆಸ್) ನಿರ್ದೇಶಕರಾಗಿದ್ದ ಶಿಲ್ಪಾ ನಾಗ್ ಸಿ.ಟಿ. ಅವರನ್ನು ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಮೈಸೂರು ಪ್ರಾದೇಶಿಕ ಆಯುಕ್ತರಾಗಿದ್ದ ಗಾಯತ್ರಿ ಕೆ.ಎಂ. ಅವರನ್ನು ಅಬ್ದುಲ್ ನಝೀರ್ ಸಾಬ್ ಗ್ರಾಮೀಣಾಭಿವೃದ್ಧಿ ಕೇಂದ್ರದ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News