ಉಡುಪಿ ಜಿಲ್ಲೆಯ 18 ಮಂದಿಗೆ ಕೊರೋನ ಪಾಸಿಟಿವ್

Update: 2021-02-27 15:27 GMT

ಉಡುಪಿ, ಫೆ.27: ಶನಿವಾರ ಜಿಲ್ಲೆಯ ಒಟ್ಟು 18 ಮಂದಿ ಕೊರೋನಕ್ಕೆ ಪಾಸಿಟಿವ್ ಬಂದಿದ್ದಾರೆ. ದಿನದಲ್ಲಿ 9 ಮಂದಿ ಸೋಂಕಿನಿಂದ ಗುಣಮುಖರಾದರೆ, ಸೋಂಕಿಗೆ ಚಿಕಿತ್ಸೆಯಲ್ಲಿರುವವರ ಸಂಖ್ಯೆ 69 ಆಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದವರಲ್ಲಿ ಐವರು ಪುರುಷರಾದರೆ ಉಳಿದ 13 ಮಂದಿ ಮಹಿಳೆಯರು. ಇವರಲ್ಲಿ 16 ಮಂದಿ ಉಡುಪಿ ತಾಲೂಕಿನವ ರಾದರೆ, ತಲಾ ಒಬ್ಬರು ಕುಂದಾಪುರ ಮತ್ತು ಕಾರ್ಕಳ ತಾಲೂಕಿನವರು. ಇವರಲ್ಲಿ 15 ಮಂದಿ ಹೋಮ್ ಐಸೋಲೇಷನ್‌ನಲ್ಲೇ ಚಿಕಿತ್ಸೆ ಪಡೆಯುತಿದ್ದಾರೆ. ಶುಕ್ರವಾರ 9 ಮಂದಿ ಸೋಂಕಿನಿಂದ ಗುಣಮುಖರಾಗುವ ಮೂಲಕ ಜಿಲ್ಲೆಯಲ್ಲಿ ಕೊರೋನದಿಂದ ಚೇತರಿಸಿ ಕೊಂಡವರ ಸಂಖ್ಯೆ ಈಗ 23,336ಕ್ಕೇರಿದೆ.

1246 ಮಂದಿ ನೆಗೆಟಿವ್: ಶುಕ್ರವಾರ ಜಿಲ್ಲೆಯ 1265 ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಇವರಲ್ಲಿ 1246 ಮಂದಿಯ ಪರೀಕ್ಷೆ ನೆಗೆಟಿವ್ ಫಲಿತಾಂಶ ನೀಡಿದೆ. ಉಳಿದ 19 ಮಂದಿಯಲ್ಲಿ (ಐಸಿಎಂಆರ್ ವರದಿ) ಸೋಂಕು ಪತ್ತೆಯಾಗಿದೆ. ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 23,597 ಆಗಿದೆ ಎಂದು ಡಾ.ಸೂಡ ವಿವರಿಸಿದರು.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 3,65,904 ಮಂದಿ ಕೋವಿಡ್ ಪರೀಕ್ಷೆಗೊಳಗಾಗಿದ್ದಾರೆ. ಇವರಲ್ಲಿ 3,42,309 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿವೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 190 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News