ಬೆಳ್ತಂಗಡಿ : ಯುವತಿ ನಾಪತ್ತೆ; ದೂರು ದಾಖಲು

Update: 2021-02-27 16:06 GMT

ಬೆಳ್ತಂಗಡಿ:  ನೆರಿಯ ನಿವಾಸಿ ತೇಜಸ್ವಿನಿ (23) ಎಂಬವರು ಫೆ.22 ರಿಂದ ಕಾಣೆಯಾಗಿದ್ದು, ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

ನೆರಿಯ ಗ್ರಾಮದ ನಿವಾಸಿ ಮಂಜುನಾಥ ಮತ್ತು ಸುಶೀಲಾ ಕೆ ದಂಪತಿ ಪುತ್ರಿಯಾಗಿರುವ ತೇಜಸ್ವಿನಿ ಯವರು ಕಳೆದ ನಾಲ್ಕು ವರ್ಷಗಳಿಂದ ಉಜಿರೆ ಪರಿಸರ ನಿವಾಸಿಯೊಬ್ಬರ ಮನೆಯಲ್ಲಿ ಮನೆಕೆಲಸ ಮಾಡಿಕೊಂಡು, ಕಂಪ್ಯೂಟರ್ ಶಿಕ್ಷಣ ಪಡೆಯುತ್ತಿದ್ದು, ಅವರ ಮನೆಯಲ್ಲಿಯೇ ವಾಸ್ತವ್ಯವಿದ್ದರು. ಫೆ.22ರಂದು ಸಂಜೆ ಕಂಪ್ಯೂಟರ್ ಕ್ಲಾಸ್ ಮುಗಿಸಿ ನೆರಿಯದಲ್ಲಿರುವ ತನ್ನ ತಾಯಿ ಮನೆಗೆ ಹೋಗಿ ಬರುವುದಾಗಿ ಹೇಳಿ ಹೋದವರು ಇದುವರೆಗೂ ಮರಳಿ ಬಾರದೆ, ಸಂಬಂಧಿಕರ ಮನೆಗೂ ಹೋಗದೆ ನಾಪತ್ತೆಯಾಗಿದ್ದಾರೆ.

ತೇಜಸ್ವಿನಿ ಯವರು ಫೆ.22ರಂದು ಕಂಪ್ಯೂಟರ್ ಕ್ಲಾಸ್ ಮುಗಿಸಿ ಮನೆಗೆ ಹೊರಟವರು ಸಂಜೆ 4 ಗಂಟೆ ಸುಮಾರಿಗೆ ನೆರಿಯ ಗ್ರಾಮದ ಅಣಿಯೂರು ಎಂಬಲ್ಲಿ ಕೋಲೋಡಿ ಕಡೆಗೆ ನಡೆದುಕೊಂಡು ಹೋಗುತ್ತಿರುವ ವೇಳೆ ತನ್ನ ಅಕ್ಕ ಸುಮಂಗಳರವರಿಗೆ ಸಿಕ್ಕಿದ್ದು, ಆಕೆ ತಮ್ಮೊಟ್ಟಿಗೆ ಜೀಪಿನಲ್ಲಿ ತಂಗಿ ತೇಜಸ್ವಿನಿಯನ್ನು ಕರೆದುಕೊಂಡು ಹೋಗಿ ಮನೆಯ ಹತ್ತಿರ ಇಳಿಸಿ ಬಳಿಕ  ಪತಿಯೊಂದಿಗೆ ತಮ್ಮ ಮನೆಗೆ ಹಿಂದಿರುಗಿದ್ದರು.

ಆದರೆ ರಾತ್ರಿ 7ಗಂಟೆಯ ವರೆಗೂ ತೇಜಸ್ವಿನಿಯವರು ಉಜಿರೆಯ ಮನೆಗೆ ಮರಳಿ ಬಾರದೆ ಇರುವ ಬಗ್ಗೆ ಮನೆಯೊಡತಿ ಯುವತಿಯ ಮನೆಯವರಿಗೆ ಫೋನ್ ಕರೆ ಮೂಲಕ ತಿಳಿಸಿದ್ದರು. ಯುವತಿಯ ಮೊಬೈಲ್ ಕೂಡ ಸ್ವೀಚ್ ಆಫ್ ಆಗಿದ್ದು, ಅತ್ತ ತಾಯಿ ಮನೆಗೂ ಹೋಗದೆ ಇತ್ತ,  ಕೆಲಸದ ಮನೆಗೂ ಹೋಗದೆ  ನಾಪತ್ತೆಯಾಗಿರುತ್ತಾರೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಯುವತಿಯ ಪೋಷಕರು ದೂರು ನೀಡಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ  ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News