ಮಾ.1ರಿಂದ ಪರಿಷತ್ ಸಚಿವಾಲಯ ಸಿಬ್ಬಂದಿಗೆ ಬಯೋಮೆಟ್ರಿಕ್ ಆಧಾರಿತ ಹಾಜರಾತಿ ಕಡ್ಡಾಯ

Update: 2021-02-27 16:40 GMT

ಬೆಂಗಳೂರು, ಫೆ. 27: ವಿಧಾನ ಪರಿಷತ್ ಸಚಿವಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ/ನೌಕರರಲ್ಲಿ ಕರ್ತವ್ಯಪ್ರಜ್ಞೆ ಹಾಗೂ ಶಿಸ್ತು ಮೂಡಿಸಲು ಮಾರ್ಚ್ 1ರಿಂದ ಬಯೋಮೆಟ್ರಿಕ್ ಆಧಾರಿತ ಹಾಜರಾತಿಯನ್ನು ಕಡ್ಡಾಯ ಮಾಡಲಾಗಿದೆ.

ಅಲ್ಲದೆ, ವಿಧಾನ ಪರಿಷತ್ ಸಚಿವಾಲಯದಲ್ಲಿ ಕೆಲಸ ಮಾಡುವ ‘ಡಿ' ದರ್ಜೆ ನೌಕರರಿಗೆ ವಸ್ತ್ರ ಸಂಹಿತೆ ಕಡ್ಡಾಯಗೊಳಿಸಿದ್ದು, ಮಾ.15ರಿಂದ ಪುರುಷರು ಬಿಳಿ ಬಣ್ಣ ಮತ್ತು ಮಹಿಳೆಯರು ಕಂದುಕೆಂಪು ಬಣ್ಣದ ಸಮವಸ್ತ್ರ ಧರಿಸಿ ಕರ್ತವ್ಯಕ್ಕೆ ಹಾಜರಾಗಬೇಕು. ಸಚಿವಾಲಯದ ಕಾರು ಚಾಲಕರೂ ಕಡ್ಡಾಯವಾಗಿ ಸಮವಸ್ತ್ರ ಧರಿಸಬೇಕೆಂದು ತಿಳಿಸಲಾಗಿದೆ.

ವಿಧಾನಸೌಧದ ಕಾರಿಡಾರ್ ಗಳಲ್ಲಿ ಗುಂಪಾಗಿ ಸೇರುವುದು ಮತ್ತು ಮೊಬೈಲ್‍ನಲ್ಲಿ ಮಾತನಾಡುತ್ತಾ ನಿಲ್ಲುವುದನ್ನು ನಿಷೇಧಿಸಲಾಗಿದೆ. ಅಲ್ಲದೆ, ಎಲ್ಲ ಶಾಖೆಯ ಶಾಖಾಧಿಕಾರಿಗಳು ಕಡ್ಡಾಯವಾಗಿ ಚಲನ-ವಲನ ಪುಸ್ತಕವನ್ನು ನಿರ್ವಹಿಸಲು ಕ್ರಮ ಕೈಗೊಳ್ಳಬೇಕು. ಸಚಿವಾಲಯದ ಹಿರಿಯ ಅಧಿಕಾರಿಗಳು ತಮ್ಮ ಅಧೀನದಲ್ಲಿರುವ ನೌಕರರಿಗೆ ಅಧಿಕೃತ ಕೆಲಸಗಳಿಗೆ ಮಾತ್ರ ಕಚೇರಿಯಿಂದ ಹೊರಗಡೆ ಹೋಗಲು ಅನುಮತಿ ನೀಡಬೇಕು ಎಂದು ಸೂಚಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News