ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆಗೆ ಬೆಲೆ ನಿಗದಿ : ಕೇಂದ್ರ ಆರೋಗ್ಯ ಸಚಿವಾಲಯ

Update: 2021-02-28 03:35 GMT

ಹೊಸದಿಲ್ಲಿ: ಕೊರೋನ ವೈರಸ್ ತಡೆ ಲಸಿಕೆಯನ್ನು ಖಾಸಗಿ ಆಸ್ಪತ್ರೆಗಳಲ್ಲಿ ಪಡೆಯಲು ಸಾರ್ವಜನಿಕರು 250 ರೂ. ಪಾವತಿಸಬೇಕಾಗುತ್ತದೆ. ಆದಾಗ್ಯೂ ಖಾಸಗಿ ಆಸ್ಪತ್ರೆ ಮತ್ತು ಕೇಂದ್ರಗಳಲ್ಲಿ ಲಸಿಕೆ ಉಚಿತವಾಗಿರುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಟಿಸಿದೆ.

ಸೋಮವಾರದಿಂದ ಕೊರೋನ ವೈರಸ್ ಲಸಿಕೆಯನ್ನು 60 ವರ್ಷ ಮೇಲ್ಪಟ್ಟ ಎಲ್ಲರಿಗೆ ಮತ್ತು ಸಹ ಅಸ್ವಸ್ಥತೆ ಹೊಂದಿರುವ 45 ವರ್ಷ ಮೇಲ್ಪಟ್ಟವರಿಗೆ ವಿಸ್ತರಿಸುವ ಹಿನ್ನೆಲೆಯಲ್ಲಿ ಲಸಿಕೆ ಕೇಂದ್ರಗಳ ಆಯ್ಕೆ ಸ್ವಾತಂತ್ರ್ಯವನ್ನು ಜನರಿಗೇ ನೀಡಲಾಗಿದೆ ಎಂದು ಸರ್ಕಾರ ಶುಕ್ರವಾರ ಹೇಳಿದೆ.

ಜನಸಾಮಾನ್ಯರು ಸರ್ಕಾರದ ಕೋವಿನ್ 2.0 ಪೋರ್ಟೆಲ್, ಆರೋಗ್ಯ ಸೇತು ಆ್ಯಪ್ ಮೂಲಕ ನೋಂದಾಯಿಸಬಹುದು ಅಥವಾ ನೇರವಾಗಿ ಲಸಿಕಾ ಕೇಂದ್ರಗಳಿಗೆ ಭೇಟಿ ನೀಡಬಹುದು. ರಾಜ್ಯಗಳು ಕೂಡಾ ಜನರನ್ನು ಲಸಿಕೆ ಪಡೆಯಲು ಸೇರಿಸಲಿವೆ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ. ದೇಶಾದ್ಯಂತ 10 ಸಾವಿರಕ್ಕೂ ಹೆಚ್ಚು ಖಾಸಗಿ ಆಸ್ಪತ್ರೆಗಳಿಗೆ ಕೋವಿಡ್ ಲಸಿಕೆ ನೀಡಲು ಅನುಮತಿ ನೀಡಲಾಗಿದ್ದು, ಎಲ್ಲ ಸರ್ಕಾರಿ ಆಸ್ಪತ್ರೆ ಮತ್ತು ಆರೋಗ್ಯ ಕೇಂದ್ರಗಳಲ್ಲೂ ಈ ಸೌಲಭ್ಯ ಇರುತ್ತದೆ.

60 ವರ್ಷ ಮೇಲ್ಪಟ್ಟವರು ಕೇವಲ ತಮ್ಮ ಗುರುತಿನ ಚೀಟಿ ಮತ್ತು ವಯಸ್ಸಿನ ದಾಖಲೆಯನ್ನು ತೋರಿಸಬೇಕಾಗುತ್ತದೆ. 45 ವರ್ಷ ಮೇಲ್ಪಟ್ಟ ಸಹ ಅಸ್ವಸ್ಥತೆ ಹೊಂದಿರುವವರು ವೈದ್ಯರಿಂದ ಸಹಿ ಮಾಡಿದ ಪ್ರಮಾಣಪತ್ರ ನೀಡಬೇಕಾಗುತ್ತದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News