ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವು ನಿಶ್ಚಿತ: ಮುಖ್ಯಮಂತ್ರಿ ಯಡಿಯೂರಪ್ಪ

Update: 2021-02-28 12:26 GMT

ಬೆಂಗಳೂರು, ಫೆ. 28: ‘ಬೆಳಗಾವಿ ಲೋಕಸಭಾ ಕ್ಷೇತ್ರ ಸೇರಿದಂತೆ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ನೂರಕ್ಕೆ ನೂರರಷ್ಟು ಅತ್ಯಂತ ಹೆಚ್ಚಿನ ಮನೆಗಳ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ' ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಭರವಸೆ ವ್ಯಕ್ತಪಡಿಸಿದ್ದಾರೆ.

ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಉಪಚುನಾವಣೆ ನಡೆಯುವ ಕ್ಷೇತ್ರಗಳಿಗೆ ಆಯವ್ಯಯದಲ್ಲಿ ಯಾವುದೇ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವುದಿಲ್ಲ. ಈಗಾಗಲೇ ಉಪಚುನಾವಣೆ ನಡೆಯುವ ಕ್ಷೇತ್ರಗಳಲ್ಲಿ ಸರಕಾರ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು, ಹೀಗಾಗಿ ನಮ್ಮ ಅಭ್ಯರ್ಥಿಗಳ ಗೆಲುವು ನಿಶ್ಚಿತ ಎಂದರು.

‘ಬೆಳಗಾವಿ ಲೋಕಸಭಾ ಕ್ಷೇತ್ರ, ಬೀದರ್ ಜಿಲ್ಲೆ ಬಸವಕಲ್ಯಾಣ, ರಾಯಚೂರು ಜಿಲ್ಲೆಯ ಮಸ್ಕಿ ಹಾಗೂ ವಿಜಯಪುರ ಜಿಲ್ಲೆಯ ಸಿಂಧಗಿ ಕ್ಷೇತ್ರಗಳಿಗೆ ಯಾವುದೇ ಸಂದರ್ಭದಲ್ಲೂ ಉಪಚುನಾವಣೆ ಎದುರಾದರೂ, ನಾವು ಸಿದ್ಧರಾಗಿದ್ದೇವೆ. ಅಭ್ಯರ್ಥಿಗಳ ಆಯ್ಕೆ ವಿಚಾರವನ್ನು ಪಕ್ಷದ ವರಿಷ್ಠರು ಹಾಗೂ ಮುಖಂಡರು ನಿರ್ಧರಿಸಲಿದ್ದಾರೆ' ಎಂದು ಯಡಿಯೂರಪ್ಪ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News