ಇತ್ತೀಚೆಗೆ ಆಯ್ಕೆಗೊಂಡಿದ್ದ ಶಿರ್ವ ಗ್ರಾಪಂ ಅಧ್ಯಕ್ಷ ಗ್ರೆಗೊರಿ ಕ್ಯಾಸ್ತಲಿನೋ ನಿಧನ

Update: 2021-02-28 12:59 GMT

ಶಿರ್ವ, ಫೆ.28: ಇತ್ತೀಚೆಗೆ ಶಿರ್ವ ಗ್ರಾಪಂ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದ ಗ್ರೆಗೊರಿ ಕೋನ್ರಾಡ್ ಕ್ಯಾಸ್ತಲೀನೋ(55) ರವಿವಾರ ಹೃದಯಾಘಾತದಿಂದ ನಿಧನರಾದರು.

ಪಕ್ಷೇತರ ಅಭ್ಯರ್ಥಿಯಾಗಿ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲವು ಸಾಧಿಸಿದ್ದ ಗ್ರೆಗೋರಿ, ಬಳಿಕ ಬಿಜೆಪಿ ಬೆಂಬಲದಿಂದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಅವರು ಸತತ ಐದು ಬಾರಿ ಗ್ರಾಪಂ ಸದಸ್ಯರಾಗಿ ಆಯ್ಕೆಯಾಗಿದ್ದರು.

ಉದ್ಯಮಿಯಾಗಿಯೂ ಶಿರ್ವ ಪರಿಸರದಲ್ಲಿ ಗುರುತಿಸಿಕೊಂಡಿದ್ದ ಅವರು, ಕಳೆದ ಏಳು ವರ್ಷಗಳ ಕಾಲ ಶಿರ್ವ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ ಮತ್ತು ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News