​ಮಂಗಳೂರು ವಿವಿ ಸಂಧ್ಯಾ ಕಾಲೇಜಿನ ರಕ್ಷಕ ಶಿಕ್ಷಕ ಸಂಘದ ಮಹಾಸಭೆ

Update: 2021-02-28 14:46 GMT

ಮಂಗಳೂರು,ಫೆ.28: ಮಂಗಳೂರು ವಿವಿ ಸಂಧ್ಯಾ ಕಾಲೇಜಿನ 2020-21ನೇ ಶೈಕ್ಷಣಿಕ ಸಾಲಿನ ರಕ್ಷಕ ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆಯು ಕಾಲೇಜಿನ ರೀಂದ್ರ ಕಲಾಭವನದಲ್ಲಿ ಶನಿವಾರ ನಡೆಯಿತು.

ರಕ್ಷಕ ಶಿಕ್ಷಕ ಸಂಘದ ಕಾರ್ಯಧ್ಯಕ್ಷೆ ಸಾವಿತ್ರಿ ಎ.ಮಾತನಾಡಿ, ಪೋಷಕರು ಮಕ್ಕಳನ್ನು ಮಿತ್ರರಂತೆ ಪೊಷೀಸಬೇಕು. ಶಿಕ್ಷಕರು ಹಾಗೂ ಪೋಷಕರಿಂದ ಸಮಾನ ರೀತಿಯ ಪ್ರೋತ್ಸಾಹ ಹಾಗೂ ಮಾರ್ಗದರ್ಶನ ದೊರೆತಾಗ ವಿದ್ಯಾರ್ಥಿಗಳ ಭವಿಷ್ಯದ ಬುನಾದಿಗೆ ಸುಲಭವಾಗುತ್ತದೆ ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ. ಸುಭಾಣಿ ಶ್ರೀವತ್ಸ ಮಾತನಾಡಿದರು. ಕಾರ್ಯಕಾರಿ ಸಮಿತಿಯ ಶಿಕ್ಷಕ ಪ್ರತಿನಿಧಿ ಮಧುಶ್ರೀ ಜೆ.ಶ್ರೀಯಾನ್ ವಾರ್ಷಿಕ ವರದಿ ವಾಚಿಸಿದರು. ಕೋಶಾಧಿಕಾರಿ ಡಾ.ಎ. ಸಿದ್ದಿಕ್ ಲೆಕ್ಕಪತ್ರ ಮಂಡಿಸಿದರು. 2020-21ನೇ ಶೈಕ್ಷಣಿಕ ಸಾಲಿನ ಸಂಘದ ಪದಾಧಿಕಾರಿಗಳ ಚುನಾವಣೆಯನ್ನು ಸಂಘದ ಕಾರ್ಯದರ್ಶಿ ಡಾ. ಜಯವಂತ್ ನಾಯಕ್ ನಡೆಸಿಕೊಟ್ಟರು.

ವೇದಿಕೆಯಲ್ಲಿ ಸಂಘದ ನೂತನ ಕಾರ್ಯಧ್ಯಕ್ಷೆ ಚಂದ್ರಕಲಾ, ಉಪಾಧ್ಯಕ್ಷ ಮಂಜುನಾಥ್, ಸಹ ಕಾರ್ಯದರ್ಶಿ ಗುಣವತಿ ಉಪಸ್ಥಿತರಿದ್ದರು.
ಉಪನ್ಯಾಸಕ ಮುಹಮ್ಮದ್ ರಿಝ್ವಾನ್ ಸ್ವಾಗತಿಸಿದರು. ಉಪನ್ಯಾಸಕ ಸಂತೋಷ್ ವಂದಿಸಿದರು. ಉಪನ್ಯಾಸಕಿ ಡಾ. ರತಿ ಪ್ರಾರ್ಥಿಸಿದರು, ಲತಾ ಸಂತೋಷ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News