ಪರಿಶಿಷ್ಟರ ಅಭಿವೃದ್ಧಿಗಾಗಿ ಬಜೆಟ್‍ನಲ್ಲಿ 50 ಸಾವಿರ ಕೋಟಿ ರೂ. ಅನುದಾನ ಮೀಸಲಿಡಲು ದಸಂಸ ಆಗ್ರಹ

Update: 2021-02-28 15:10 GMT

ಬೆಂಗಳೂರು, ಫೆ. 28: ರಾಜ್ಯದಲ್ಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ(ಎಸ್ಸಿ-ಎಸ್ಟಿ)ದ ಅಭಿವೃದ್ಧಿಗೆ 2021-22ನೆ ಸಾಲಿನ ಆಯವ್ಯಯದಲ್ಲಿ 50 ಸಾವಿರ ಕೋಟಿ ರೂ.ಗಳಷ್ಟು ಹಣವನ್ನು ಮೀಡಲಿಸಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಮಾ.2ರಂದು ಇಲ್ಲಿನ ಬನ್ನಪ್ಪ ಪಾರ್ಕ್ ನಿಂದ ಮೈಸೂರು ಬ್ಯಾಂಕ್ ವೃತ್ತದ ವರೆಗೆ ರ್‍ಯಾಲಿ, ತಮಟೆ ಚಳವಳಿ ಹಮ್ಮಿಕೊಂಡಿದೆ.

ಪರಿಶಿಷ್ಟ ಜಾತಿಯ ಒಳ ಮೀಸಲಾತಿ ವರ್ಗೀಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎ.ಜೆ.ಸದಾಶಿವ ಅವರು ವರದಿಯನ್ನು ಜಾರಿ ಮಾಡಬೇಕು. ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ಅವರ ಪರಿಶಿಷ್ಟರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ ವರದಿಯನ್ನು ಅನುಷ್ಟಾನಕ್ಕೆ ತರಬೇಕು ಎಂದು ಒತ್ತಾಯಿಸಿ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಎಚ್.ಮಾರಪ್ಪ ನೇತೃತ್ವದಲ್ಲಿ ಈ ಚಳವಳಿ ಹಮ್ಮಿಕೊಳ್ಳಲಾಗಿದೆ.

ಮಾ.2ರ ಬೆಳಗ್ಗೆ 11:30ಕ್ಕೆ ರ್‍ಯಾಲಿ ಆರಂಭಗೊಳ್ಳಲಿದ್ದು, ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟಲು ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಕೈಗೊಂಡಿರುವ ಈ ಹೋರಾಟದಲ್ಲಿ ಸಂಘಟನೆಯ ಮುಖಂಡರು ಹಾಗೂ ಪದಾಧಿಕಾರಿಗಳು ಭಾಗವಹಿಸಲಿದೆ. ಆ ಬಳಿಕ ಮುಖಂಡರ ನಿಯೋಗ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಸಲ್ಲಿಸಲಾಗುವುದು ಎಂದು ಮಾರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News