ಕರ್ತವ್ಯನಿರತ ಎಎಸ್ಸೈ ಹೃದಯಾಘಾತದಿಂದ ಸಾವು
Update: 2021-02-28 21:42 IST
ಬೆಂಗಳೂರು, ಫೆ.28: ಕರ್ತವ್ಯನಿರತ ಎಎಸ್ಸೈ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಗರದ ಜೆಸಿ ನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಜೆಸಿ ನಗರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಂಗಸ್ವಾಮಯ್ಯ ಮೃತ ಎಎಸ್ಸೈ ಆಗಿದ್ದು, ಶನಿವಾರ ಸಂಜೆ ವೇಳೆ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಇದ್ದಕ್ಕಿದ್ದ ಹಾಗೆ ಮೂರ್ಚೆ ಹೋಗಿದ್ದರು.
ಕೂಡಲೇ ಸಹೋದ್ಯೋಗಿ ಪೊಲೀಸ್ ಸಿಬ್ಬಂದಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯದಲ್ಲಿಯೇ ರಂಗಸ್ವಾಮಯ್ಯ ಅವರು ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಸಿಬ್ಬಂದಿ ದೃಢಪಡಿಸಿದ್ದಾರೆ.