ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಚಿರತೆ ದಾಳಿ
Update: 2021-02-28 23:22 IST
ಕೆ.ಆರ್. ಪೇಟೆ, ಫೆ.28: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ತಾಲೂಕಿನ ಕಿಕ್ಕೇರಿ ಸಮೀಪದ ಕಾಳೇನಹಳ್ಳಿ ಗ್ರಾಮದ ಬಳಿ ರವಿವಾರ ಸಂಜೆ ನಡೆದಿದೆ.
ಗ್ರಾಮದ ಶೀವೇಗೌಡರ ಮಗ ದರ್ಶನ್ ಮೇಲೆ ಚಿರತೆ ದಾಳಿ ನಡೆದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಿಕ್ಕೇರಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಕಳೆದ ಮೂರು ನಾಲ್ಕು ತಿಂಗಳಿಂದ ಪ್ರತ್ಯಕ್ಷವಾಗುತ್ತಿದ್ದ ಚಿರತೆ ಸೆರೆಗೆ ಅರಣ್ಯ ಅಧಿಕಾರಿಗಳು ಕ್ರಮವಹಿಸಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.