ಐಪಿಎಲ್-2021 ಆತಿಥ್ಯ ವಹಿಸಲು ಆರು ನಗರಗಳು ಸಜ್ಜು

Update: 2021-03-01 04:51 GMT

ಮುಂಬೈ: ಮುಂಬೈ, ಬೆಂಗಳೂರು, ಚೆನ್ನೈ, ಕೋಲ್ಕತಾ, ಅಹಮದಾಬಾದ್ ಮತ್ತು ದಿಲ್ಲಿ ನಗರಗಳು ಈ ವರ್ಷದ ಐಪಿಎಲ್ ಆತಿಥ್ಯ ವಹಿಸಲು ಮುಂದಾಗಿವೆ.

  ಸ್ಥಳೀಯ ಕ್ರಿಕೆಟ್ ಸಂಘಕ್ಕೆ ಸಂಬಂಧಿಸಿದ ಕಾರಣಗಳಿಗಾಗಿ ಹೈದರಾಬಾದ್‌ನ್ನು ಸೇರಿಸಲು ಸಾಧ್ಯವಿಲ್ಲ ಎಂದು ಮಂಡಳಿಗೆ ಮನವರಿಕೆಯಾದ ಹಿನ್ನೆಲೆಯಲ್ಲಿ ದಿಲ್ಲಿಯನ್ನು ಈ ಪಟ್ಟಿಯಲ್ಲಿ ಸೇರಿಸಲಾಗಿದೆ.

  ವಿವಿಧ ವಿಷಯಗಳ ಬಗ್ಗೆ ಕೇಂದ್ರದೊಂದಿಗೆ ಭಿನ್ನಾಭಿಪ್ರಾಯ ಹೊಂದಿರುವ ಮಹಾರಾಷ್ಟ್ರ ಸರಕಾರವು ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುವ ಪಂದ್ಯಗಳಿಗೆ ಆತಿಥ್ಯ ನೀಡಲು ನಿರ್ಧರಿಸಿದೆ. ಆದರೆ ಪ್ರೇಕ್ಷಕರಿಗೆ ವಾಂಖೆಡೆ ಕ್ರೀಡಾಂಗಣಕ್ಕೆ ಪ್ರವೇಶಕ್ಕೆ ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಮುಂಬೈ ಕ್ರಿಕೆಟ್ ಸಂಸ್ಥೆ ಸ್ಪಷ್ಟಪಡಿಸಿದೆ.

 ಪುಣೆಯಲ್ಲಿ ಇಂಗ್ಲೆಂಡ್ ವಿರುದ್ಧದ ಮೂರು ಏಕದಿನ ಪಂದ್ಯಗಳನ್ನು ಪ್ರೇಕ್ಷಕರ ಅನುಪಸ್ಥಿತಿಯಲ್ಲಿ ನಡೆಸಲು ಈಗಾಗಲೇ ಬಿಸಿಸಿಐ ತೀರ್ಮಾನಿಸಿದೆ. ಅದೇ ರೀತಿ ಐಪಿಎಲ್‌ನಲ್ಲೂ ಮುಂಬೈನಲ್ಲಿ ನಡೆಯುವ ಪಂದ್ಯಗಳಿಗೂ ಯಾವುದೇ ಪ್ರೇಕ್ಷಕರಿಗೂ ಅನುಮತಿ ಇರುವುದಿಲ್ಲ, ಮಹಾರಾಷ್ಟ್ರದಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಹಠಾತ್ ಹೆಚ್ಚಳದಿಂದಾಗಿ ಈಗ ಮುಚ್ಚಿದ ಬಾಗಿಲುಗಳ ಹಿಂದೆ ಇಂಗ್ಲೆಂಡ್ ವಿರುದ್ಧದ ಸರಣಿಯನ್ನು ಆಯೋಜಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News