​ಉಡುಪಿ: ಜಿಲ್ಲೆಯ ನಾಲ್ವರಲ್ಲಿ ಕೊರೋನ ಸೋಂಕು ಪತ್ತೆ

Update: 2021-03-01 13:15 GMT

ಉಡುಪಿ, ಮಾ.1: ಸೋಮವಾರ ಜಿಲ್ಲೆಯ ನಾಲ್ಕು ಮಂದಿಯಲ್ಲಿ ಮಾತ್ರ ಕೊರೋನ ಸೋಂಕು ಪತ್ತೆಯಾಗಿದೆ. ದಿನದಲ್ಲಿ 14 ಮಂದಿ ಸೋಂಕಿನಿಂದ ಗುಣಮುಖರಾದರೆ, ಸೋಂಕಿಗೆ ಚಿಕಿತ್ಸೆಯಲ್ಲಿರುವವರ ಸಂಖ್ಯೆ 63ಕ್ಕಿಳಿದಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ‌ಚಂದ್ರ ಸೂಡ ತಿಳಿಸಿದ್ದಾರೆ.

ಇಂದು ಪಾಸಿಟಿವ್ ಬಂದವರಲ್ಲಿ ತಲಾ ಇಬ್ಬರು ಪುರುಷರು ಮತ್ತು ಮಹಿಳೆಯರು. ಇವರಲ್ಲಿ ಒಬ್ಬರು ಉಡುಪಿ ತಾಲೂಕಿನವರಾದರೆ, ಮೂವರು ಕಾರ್ಕಳ ತಾಲೂಕಿನವರು. ಇಂದು ಸೋಂಕು ಪತ್ತೆಯಾದ ನಾಲ್ವರಲ್ಲಿ ಮೂವರು ಹೋಮ್ ಐಸೋಲೇಷನ್‌ನಲ್ಲಿ ಚಿಕಿತ್ಸೆಯಲ್ಲಿದ್ದಾರೆ. ರವಿವಾರ 14 ಮಂದಿ ಸೋಂಕಿನಿಂದ ಗುಣಮುಖರಾಗುವ ಮೂಲಕ ಜಿಲ್ಲೆಯಲ್ಲಿ ಕೊರೋನದಿಂದ ಚೇತರಿಸಿ ಕೊಂಡವರ ಸಂಖ್ಯೆ ಈಗ 23,362ಕ್ಕೇರಿದೆ.

813 ಮಂದಿ ನೆಗೆಟಿವ್: ರವಿವಾರ ಜಿಲ್ಲೆಯ 818 ಮಂದಿ ಕೋವಿಡ್ ಪರೀಕ್ಷೆ ಮಾಡಿಸಿ ಕೊಂಡಿದ್ದು, ಇವರಲ್ಲಿ 813 ಮಂದಿಯ ಪರೀಕ್ಷೆ ನೆಗೆಟಿವ್ ಫಲಿತಾಂಶ ನೀಡಿದೆ. ಉಳಿದ ಐವರಲ್ಲಿ (ಐಸಿಎಂಆರ್ ವರದಿ) ಸೋಂಕು ಪತ್ತೆಯಾಗಿದೆ. ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಒಟ್ಟು ಸಂಖ್ಯೆ ಈಗ 23,615 ಆಗಿದೆ ಎಂದು ಡಾ.ಸೂಡ ವಿವರಿಸಿದರು.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 3,68,241 ಮಂದಿ ಕೋವಿಡ್ ಪರೀಕ್ಷೆಗೊಳಗಾಗಿದ್ದಾರೆ. ಇವರಲ್ಲಿ 3,44,626 ಮಂದಿಯ ಪರೀಕ್ಷಾ ವರದಿ ನೆಗೆಟಿವ್ ಬಂದಿವೆ. ಜಿಲ್ಲೆಯಲ್ಲಿ ಇಂದು ಸಹ ಕೋವಿಡ್‌ನಿಂದ ಯಾರೂ ಮೃತಪಟ್ಟಿದೆ. ಈವರೆಗೆ ಒಟ್ಟು 190 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News