ಎಸೆಸೆಲ್ಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ: ಜೂನ್ 21ರಂದು ಪರೀಕ್ಷೆ ಆರಂಭ

Update: 2021-03-01 16:55 GMT

ಧಾರವಾಡ, ಮಾ.1: ಈ ವರ್ಷದ ಎಸೆಸೆಲ್ಸಿ ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, ಪರೀಕ್ಷೆಗಳು ಜೂನ್ 21 ರಿಂದ ಜುಲೈ 5 ರವರೆಗೆ ನಡೆಯಲಿವೆ. ಈ ಮೊದಲು ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದ್ದು, ಸಲಹೆ, ಮನವಿಗಳನ್ನು ಪರಿಗಣಿಸಿ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಜೂನ್ 21-ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ,

ಜೂ.24- ಗಣಿತ, ಸಮಾಜಶಾಸ್ತ್ರ,

ಜೂ.26-ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಅಂಡ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2, ಇಂಜಿನಿಯರಿಂಗ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್ ಹಾಗೂ ಅರ್ಥಶಾಸ್ತ್ರ.

ಜೂ.28- ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ,

ಜೂ.30-ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು. ಎನ್.ಎಸ್.ಕ್ಯೂ.ಎಫ್ ಪರೀಕ್ಷಾ ವಿಷಯಗಳಾದ ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್‍ನೆಸ್

ಜು.2-ದ್ವಿತೀಯ ಭಾಷೆಗಳಾದ ಇಂಗ್ಲಿಷ್, ಕನ್ನಡ,

ಜು.5ರಂದು ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ ಎಂದು ಅವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News