ರಮೇಶ್ ಶೆಟ್ಟಿಗೆ ಜೀವ ಬೆದರಿಕೆ ಪ್ರಕರಣ: ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಎಸ್ಪಿಗೆ ಮನವಿ

Update: 2021-03-01 14:28 GMT

ಉಡುಪಿ, ಮಾ.1: ಕಾಂಗ್ರೆಸ್ ಮುಖಂಡ, ಗ್ರಾಪಂ ಹಾಲಿ ಸದಸ್ಯ ಎನ್. ರಮೇಶ್ ಶೆಟ್ಟಿ ಕುಕ್ಕೆಹಳ್ಳಿ ಅವರಿಗೆ ಜೀವ ಬೆದರಿಕೆ ಹಾಗೂ ಮನೆ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿ ತಪ್ಪಿತಸ್ಥರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ್ ಅವರಿಗೆ ಇಂದು ಮನವಿ ಸಲ್ಲಿಸಲಾಯಿತು.

ಕೊಲೆ ಯತ್ನ ಹಾಗೂ ಇನ್ನಿತರ ಅಪರಾಧಕ್ಕಾಗಿ ಈ ಪ್ರಕರಣದ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಆರೋಪಿಗಳನ್ನು ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ ಮಾಡ ಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ಸಂದರ್ಭದಲ್ಲಿ ಜಿಪಂ ಸದಸ್ಯ ಜನಾರ್ದನ ತೋನ್ಸೆ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಮಾಜಿ ಜಿಪಂ ಅಧ್ಯಕ್ಷ ಭುಜಂಗ ಶೆಟ್ಟಿ, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿನಕರ ಹೇರೂರು, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಅಮೀನ್ ಪಡುಕೆರೆ, ನಾಯಕರಾದ ಯತೀಶ್ ಕರ್ಕೇರಾ, ಕೃಷ್ಣಪ್ಪ ಪೂಜಾರಿ, ಸತೀಶ್ ಉಪ್ಪೂರು, ರೆಹಮಾನ್, ಪ್ರದೀಪ್ ಅಂಚನ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News