ಖೋಟಾನೋಟು ಚಲಾವಣೆ ಆರೋಪ: ನಾಲ್ವರ ಸೆರೆ

Update: 2021-03-01 14:46 GMT

ಬೆಂಗಳೂರು, ಮಾ.1: ಖೋಟಾನೋಟು ಚಲಾವಣೆ ಮಾಡುತ್ತಿದ್ದ ಆರೋಪದಡಿ ನಾಲ್ವರನ್ನು ಎಲೆಕ್ಟ್ರಾನಿಕ್ ಸಿಟಿ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಚಾಮರಾಜನಗರದ ಜಿಲ್ಲೆಯ ಕೊಳ್ಳೇಗಾಲದ ಶಿವ, ನಾಗೇಂದ್ರ, ಪ್ರಕಾಶ್ ಹಾಗೂ ಲಕ್ಷ್ಮಣ ಬಂಧಿತ ಆರೋಪಿಗಳಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ಕಾರಿನಲ್ಲಿ ಸೆಲೆಬ್ರಿಟಿ ಲೇಔಟ್ ರಸ್ತೆಯಲ್ಲಿ ಖೋಟಾನೋಟು ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರಿಂದ 6.80 ಲಕ್ಷರೂ. ಮೌಲ್ಯದ 2 ಸಾವಿರ ಮುಖಬೆಲೆಯ 340 ನಕಲಿ ನೋಟುಗಳನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News