ದ.ಕ.ಜಿಲ್ಲೆ: 8 ಮಂದಿಗೆ ಕೊರೋನ ಪಾಸಿಟಿವ್

Update: 2021-03-01 16:40 GMT

ಮಂಗಳೂರು, ಮಾ.1: ದ.ಕ.ಜಿಲ್ಲೆಯಲ್ಲಿ ಸೋಮವಾರ 8 ಮಂದಿಯಲ್ಲಿ ಕೊರೋನ ಪಾಸಿಟಿವ್ ಧೃಢಪಡುವುದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 34,449 ಪಾಸಿಟಿವ್ ಪ್ರಕರಣಗಳು ಕಂಡು ಬಂದಿದೆ.

ಸೋಮವಾರ 22 ಮಂದಿ ಚಿಕಿತ್ಸೆ ಪಡೆದು ಬಿಡುಗಡೆಗೊಳ್ಳುವುದರೊಂದಿಗೆ ಈವರೆಗೆ 33,514 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 5,68,775 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿತ್ತು. ಆ ಪೈಕಿ 5,34,326 ಮಂದಿಯ ವರದಿ ನೆಗೆಟಿವ್ ಬಂದಿದೆ. ಅಲ್ಲದೆ 195 ಸಕ್ರಿಯ ಪ್ರಕರಣವಿದೆ. ಈವರೆಗೆ ಕೊರೋನ ಸೋಂಕಿಗೆ ಜಿಲ್ಲೆಯಲ್ಲಿ 740 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 34,805 ಮಂದಿಯ ವಿರುದ್ಧ ಮಾಸ್ಕ್ ಉಲ್ಲಂಘಿಸಿದ ಪ್ರಕರಣ ದಾಖಲಿಸಲಾಗಿದ್ದು, 35,87,910 ರೂ. ದಂಡವನ್ನು ವಸೂಲಿ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News