ಬೆಂಗಳೂರು ಗಲಭೆ ಪ್ರಕರಣ: ಶಾಸಕ ಅಖಂಡ ಶ್ರೀನಿವಾಸಮೂರ್ತಿಗೆ ಹೈಕೋರ್ಟ್ ನೋಟಿಸ್

Update: 2021-03-01 18:02 GMT

ಬೆಂಗಳೂರು, ಮಾ.1: ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣ ಸಂಬಂಧ ಮಾಜಿ ಮೇಯರ್ ಸಂಪತ್ ರಾಜ್ ಅವರ ಸಂಬಂಧಿ ಅರುಣ್ ಮನೋರಾಜ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮತ್ತು ದೇವರಜೀವನಹಳ್ಳಿ ಠಾಣೆ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.

ಪ್ರಕರಣದಲ್ಲಿ ಜಾಮೀನು ನೀಡುವಂತೆ ಕೋರಿ ಅರುಣ್ ಮನೋರಾಜ್ ಸಲ್ಲಿಸಿದ್ದ ಕ್ರಿಮಿನಲ್ ಮೇಲ್ಮನವಿಯನ್ನು ನ್ಯಾ. ಜಾನ್ ಮೈಕೆಲ್ ಕುನ್ಹ ಅವರಿದ್ದ ಏಕ ಸದಸ್ಯ ಪೀಠ ವಿಚಾರಣೆ ನಡೆಸಿತು. 

ಗಲಭೆ ವೇಳೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲೆ ದಾಳಿ ನಡೆಸಲು ಒಳಸಂಚು ರೂಪಿಸಿದ ಆರೋಪದ ಮೇಲೆ ಅರುಣ್ ಮನೋರಾಜ್ ಅವರನ್ನು ಬಂಧಿಸಲಾಗಿದೆ. ಶಾಸಕ ಅಖಂಡ ಶ್ರೀನಿವಾಸ 2020ರ ಆ.13ರಂದು ನೀಡಿರುವ ದೂರು ಆಧರಿಸಿ ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇವರ ಜಾಮೀನು ಅರ್ಜಿಯನ್ನು 67ನೇ ಸಿಟಿ ಸಿವಿಲ್ ಕೋರ್ಟ್ 2021ರ ಫೆ.5ರಂದು ತಿರಸ್ಕರಿಸಿದೆ.

ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಮೊರೆ ಹೋಗಿರುವ ಆರೋಪಿ ಅರುಣ್, ಪ್ರಕರಣದಲ್ಲಿ ತಮ್ಮ ಯಾವುದೇ ಪಾತ್ರ ಇಲ್ಲದಿದ್ದರೂ ಪೊಲೀಸರು ಸುಳ್ಳು ಆರೋಪದ ಮೇಲೆ ಬಂಧಿಸಿದ್ದಾರೆ. ಪ್ರಕರಣದ ಇತರೆ ಆರೋಪಿಗಳಿಗೆ ಈಗಾಗಲೇ ಜಾಮೀನು ದೊರೆತಿದೆ. ಹೀಗಾಗಿ, ತನಗೂ ಜಾಮೀನು ಮಂಜೂರು ಮಾಡಬೇಕು ಎಂದು ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News