ಕಾಸರಗೋಡು : ಇಂಧನ ಬೆಲೆ ಏರಿಕೆ ವಿರೋಧಿಸಿ ಮುಷ್ಕರ

Update: 2021-03-02 07:23 GMT

ಕಾಸರಗೋಡು : ಇಂಧನ ಬೆಲೆ ಏರಿಕೆ ವಿರೋಧಿಸಿ ಮೋಟಾರ್  ಮಾಲಕರ ಹಾಗೂ ಕಾರ್ಮಿಕರ ಒಕ್ಕೂಟ ಕರೆ ನೀಡಿರುವ ಮುಷ್ಕರಕ್ಕೆ ಉತ್ತಮ ಪ್ರತಿಕ್ರಿಯೆ ಕಂಡುಬಂದಿದೆ.

ಇಂದು ಬೆಳಗ್ಗೆ 6ರಿಂದ ಸಂಜೆ 6 ಗಂಟೆ ತನಕ ಮುಷ್ಕರ ನಡೆಯುತ್ತಿದ್ದು, ಬಸ್ಸು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಆಟೋ - ಟ್ಯಾಕ್ಸಿ ಕೂಡಾ ಮುಷ್ಕರದಲ್ಲಿ ಭಾಗಿಯಾಗಿದ್ದು , ಅಂಗಡಿ ಮುಂಗಟ್ಟುಗಳು ಬಹುತೇಕ ಮುಚ್ಚಿವೆ. ಬಿಜೆಪಿ ಬೆಂಬಲಿತ ಬಿಎಂಎಸ್  ಸಂಘಟನೆ ಹೊರತುಪಡಿಸಿ ಉಳಿದೆಲ್ಲಾ ಸಂಘಟನೆಗಳು ಮುಷ್ಕರದಲ್ಲಿ ಪಾಲ್ಗೊಂಡಿವೆ.

ಖಾಸಗಿ, ಕೆಎಸ್ ಆರ್ ಟಿಸಿ ಬಸ್ಸು ಸಂಚಾರ ಸಂಪೂರ್ಣ ಮೊಟಕುಗೊಂಡಿವೆ. ಮುಷ್ಕರದ ಹಿನ್ನೆಲೆಯಲ್ಲಿ ಎಸ್ಸೆಸ್ಸೆಲ್ಸಿ , ಹೈಯರ್ ಸೆಕಂಡರಿ ಹಾಗೂ ವಿಶ್ವವಿದ್ಯಾನಿಲಯಗಳ ಪರೀಕ್ಷೆಗಳನ್ನು ಮುಂದೂಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News