ಶಿವಮೊಗ್ಗ: ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಧರಣಿ
Update: 2021-03-02 20:34 IST
ಶಿವಮೊಗ್ಗ: ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ಆಗ್ರಹಿಸಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ನಗರದ ಗೋಪಿ ವೃತ್ತದಲ್ಲಿ ಧರಣಿ ನಡೆಸಿದರು.
ನಗರದ ಗೋಪಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು, ಮುಖ್ಯಮಂತ್ರಿಗಳು ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಬೇಕು ಹಾಗೂ ಜಾರಕಿಹೊಳಿಯನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಆಧ್ಯಕ್ಷ ಗಿರೀಶ್, ಮುಖಂಡರಾದ ಕೆ.ರಂಗನಾಥ್,ಪ್ರವೀಣ್ ಸೇರಿದಂತೆ ಇತರರು ಇದ್ದರು.