ಪಾಪ ಯಾವ ಹೆಣ್ಣುಮಗಳೋ ನನಗೆ ಗೊತ್ತಿಲ್ಲ, ತಪ್ಪು ಸಾಬೀತಾದರೆ ನನ್ನನ್ನು ಗಲ್ಲಿಗೇರಿಸಲಿ: ಸಚಿವ ರಮೇಶ್ ಜಾರಕಿಹೊಳಿ
ಬೆಂಗಳೂರು: ನಾನು ಧಾರ್ಮಿಕತೆಯಲ್ಲಿ ನಂಬಿಕೆ ಇಟ್ಟವನು. ನಾನೇನೂ ತಪ್ಪು ಮಾಡಿಲ್ಲ. ನನ್ನ ತಪ್ಪಿದ್ದರೆ ಗಲ್ಲಿಗೇರಿಸಲಿ. ಯುವತಿ ಯಾರೋ ನನಗೆ ಗೊತ್ತಿಲ್ಲ. ಈ ಬಗ್ಗೆ ತನಿಖೆಯಾಗಲಿ. ನನ್ನ ಹತ್ತಿರ ಯಾರೂ ಬಂದಿಲ್ಲ. ಪಾಪ ಯಾವ ಹೆಣ್ಣುಮಗಳೋ ನನಗೆ ಗೊತ್ತಿಲ್ಲ. ಆ ಯುವತಿ ಯಾರೆಂದೇ ನನಗೆ ಗೊತ್ತಿಲ್ಲ. ನಾನು ತಪ್ಪು ಮಾಡಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ ಘೋಷಿಸುತ್ತೇನೆ. ದಿನೇಶ್ ಕಲ್ಲಹಳ್ಳಿ ಯಾರೆಂದು ಗೊತ್ತಿಲ್ಲ. ಸಮಗ್ರ ತನಿಖೆಯಾಗಲಿ ಎಂದು ಸಿಎಂಗೆ ಮನವಿ ಮಾಡುತ್ತೇನೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಖಾಸಗಿ ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿದ್ದಾರೆ.
ಬದುಕಿನಲ್ಲಿ ನಾನು ಯಾವತ್ತೂ ಹೊಲಸು ಕೆಲಸ ಮಾಡಿಲ್ಲ. ಘಟನೆಯ ಬಗ್ಗೆ ತಿಳಿದಾಗ ನನಗೆ ಆಘಾತವಾಯಿತು. ಅದಕ್ಕಾಗಿ ಬೆಂಗಳೂರಿಗೆ ಬಂದಿದ್ದೇನೆ. ಘಟನೆ ಬಗ್ಗೆ ತನಿಖೆಯಾಗಲಿ ಎಂದು ಅವರು ಹೇಳಿದರು.
ಮಾಧ್ಯಮಗಳಲ್ಲಿ ಭಿತ್ತರವಾಗುತ್ತಿರುವ ಸುದ್ದಿಯನ್ನು ನೋಡಿದ್ದೇನೆ. ಮಾನಸಿಕವಾಗಿ ತೀವ್ರ ಆಘಾತಕ್ಕೊಳಗಾಗಿದ್ದೇನೆ. ಇದು ಒಂದು ರಾಜಕೀಯ ಷಡ್ಯಂತ್ರದ ಭಾಗ. ನಾನೇ ನೇರವಾಗಿ ಮಾಧ್ಯಮಗಳ ಮುಂದೆ ಬಂದು ಎಲ್ಲಾ ಸಂದೇಹಗಳಿಗೂ ಉತ್ತರಿಸಲಿದ್ದೇನೆ. ಸಂತ್ರಸ್ತೆ ಅನ್ನುವವರು ದೂರು ಕೊಡದೇ ಯಾರೋ ಮೂರನೇ ವ್ಯಕ್ತಿ ದೂರು ನೀಡಿರುವುದು ನನ್ನ ವಿರುದ್ಧದ ವ್ಯವಸ್ಥಿತ ಪಿತೂರಿಯೇ ಆಗಿದೆ. ದಯವಿಟ್ಟು ಮಾಧ್ಯಮಗಳ ಸನ್ಮಿತ್ರರು ಸಹಕರಿಸಿ.
- ರಮೇಶ್ ಜಾರಕಿಹೊಳಿ, ಜಲಸಂಪನ್ಮೂಲ ಸಚಿವ