ದ.ಕ. ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಅರ್ಜಿ ಆಹ್ವಾನ
ಮಂಗಳೂರು, ಮಾ. 2: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ (ದೌರ್ಜನ್ಯ ಪ್ರತಿಬಂಧ) ನಿಯಮಗಳ (1995ರಡಿ) ಜಿಲ್ಲಾಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿಯನ್ನು ರಚಿಸಲು ಪ.ಜಾತಿ ಮತ್ತು ಪ.ಪಂಗಡಕ್ಕೆ ಸೇರಿದ ಹಾಗೂ ಇತರೆ ಸಮುದಾಯದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮಾ.5 ಕೊನೆಯ ದಿನವಾಗಿದೆ. ಅರ್ಜಿ ನಮೂನೆ ಹಾಗೂ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ದ.ಕ. ಜಿಪಂ ಕಟ್ಟಡ, ಉರ್ವಸ್ಟೋರ್, ಅಶೋಕನಗರ ಅಂಚೆ, ಮಂಗಳೂರು-575006, ದೂ.ಸಂ:0824-2451237ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮ್ಯಾನುವೆಲ್ ಸ್ಕ್ಯಾವೆಂಜರ್ ನೇಮಕಾತಿ ನಿಷೇಧ ಮತ್ತು ಅವರ ಪುನರ್‌ವಸತಿ ಅಧಿನಿಯಮ 2013ರಂತೆ ಜಿಲ್ಲಾ ಮಟ್ಟದ ಸಮಿತಿಯನ್ನು ರಚಿಸಲು ಪೌರ ಕಾರ್ಮಿಕರ ಸಂಘದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮಾ.5 ಕೊನೆಯ ದಿನವಾಗಿದೆ. ಅರ್ಜಿ ನಮೂನೆ ಹಾಗೂ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ದ.ಕ. ಜಿಪಂ ಕಟ್ಟಡ, ಉರ್ವಸ್ಟೋರ್ಸ್, ಅಶೋಕನಗರ ಅಂಚೆ, ಮಂಗಳೂರು-575006, ದೂ.ಸಂ:0824-2451237ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ