×
Ad

ಎಸ್‌ಡಿಪಿಐ ಪಕ್ಷಕ್ಕೆ ಸೇರ್ಪಡೆ

Update: 2021-03-02 22:06 IST

ಮಂಗಳೂರು, ಮಾ.2: ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ಕಡಬ ತಾಲೂಕು ಸಮಿತಿಯ ಅಧ್ಯಕ್ಷ ವಿಕ್ಟರ್ ಮಾರ್ಟಿಸ್ ಮಂಗಳವಾರ ಎಸ್‌ಡಿಪಿಐ ಪಕ್ಷಕ್ಕೆ ಸೇರ್ಪಡೆಗೊಂಡರು.

ಪಕ್ಷದ ಜಿಲ್ಲಾ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ ಪಕ್ಷದ ಪ್ರತಿಜ್ಞಾ ವಿಧಿಯನ್ನು ಭೋದಿಸಿ ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭ ರಾಜ್ಯ ಮುಖಂಡರಾದ ಜಲೀಲ್ ಕೆ, ಆನಂದ ಮಿತ್ತಬೈಲ್, ಇಕ್ಬಾಲ್ ಬೆಳ್ಳಾರೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಎಸ್.ಎಚ್, ಕಾರ್ಯದರ್ಶಿಗಳಾದ ಅನ್ವರ್ ಸಾದಾತ್ ಬಜತ್ತೂರು, ಜಮಾಲ್ ಜೋಕಟ್ಟೆ, ಅಶ್ರಫ್ ಮಂಚಿ, ಕೋಶಾಧಿಕಾರಿ ನೂರುಲ್ಲಾ ಕುಳಾಯಿ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News