ಮನೆಯಲ್ಲಿ ಕೋವಿಡ್ ಲಸಿಕೆ ಪಡೆದ ಸಚಿವ ಬಿ.ಸಿ.ಪಾಟೀಲ್: ರಾಜ್ಯ ಸರಕಾರದಿಂದ ವರದಿ ಕೇಳಿದ ಕೇಂದ್ರ

Update: 2021-03-02 17:47 GMT

ಬೆಂಗಳೂರು, ಮಾ.2: ಕೃಷಿ ಸಚಿವ ಬಿ.ಸಿ.ಪಾಟೀಲ್ ತಮ್ಮ ಮತಕ್ಷೇತ್ರ ಹಿರೇಕೆರೂರಿನಲ್ಲಿರುವ ಮನೆಯಲ್ಲಿ ಸರಕಾರಿ ವೈದ್ಯರಿಂದ ಕೋವಿಡ್ ಲಸಿಕೆ ಪಡೆದುಕೊಂಡಿರುವ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಸಚಿವರ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ನಿಯಮಾವಳಿಗಳ ಪ್ರಕಾರ ಕೋವಿಡ್ ಲಸಿಕೆಯನ್ನು ಆಸ್ಪತ್ರೆಗಳಲ್ಲೆ ಪಡೆದುಕೊಳ್ಳಬೇಕು. ಆದರೆ, ಸಚಿವ ಬಿ.ಸಿ.ಪಾಟೀಲ್ ತಮ್ಮ ನಿವಾಸಕ್ಕೆ ಸರಕಾರಿ ವೈದ್ಯರನ್ನು ಕರೆಸಿ ಲಸಿಕೆ ಪಡೆದುಕೊಂಡಿರುವ ಬಗ್ಗೆ ನೆಟ್ಟಿಗರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೆ, ಈ ಸಂಬಂಧ ಕೇಂದ್ರ ಸರಕಾರವು ವರದಿ ನೀಡುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದೆ ಎಂದು ತಿಳಿದು ಬಂದಿದೆ.

ಪ್ರಧಾನಿ ನರೇಂದ್ರ ಮೋದಿಯೆ ಆಸ್ಪತ್ರೆಗೆ ತೆರಳಿ ಕೋವಿಡ್ ಲಸಿಕೆ ಪಡೆದುಕೊಂಡಿದ್ದಾರೆ. ಆದರೆ, ತಾವು ವೈದ್ಯರನ್ನು ಮನೆಗೆ ಕರೆದುಕೊಂಡು ಲಸಿಕೆ ಪಡೆದುಕೊಂಡಿದ್ದು ಎಷ್ಟರ ಮಟ್ಟಿಗೆ ಸರಿ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News