×
Ad

‘ಕ್ರೈಸ್ತರ ಅವಹೇಳನ’ ಆರೋಪ: ಪ್ರತಾಪ್ ಸಿಂಹ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಸ್‍ಡಿಪಿಐ ಆಗ್ರಹ

Update: 2021-03-02 23:03 IST

ಬೆಂಗಳೂರು, ಮಾ.2: ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಸರಕಾರಿ ಸಭೆಯಲ್ಲಿ ಕ್ರೈಸ್ತ ಧರ್ಮದವರನ್ನು ಅವಹೇಳನ ಮಾಡಿದ ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಸರಕಾರ ಕೂಡಲೆ ಕ್ರಮ ಕೈಗೊಳ್ಳಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‍ಡಿಪಿಐ) ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್ ಆಗ್ರಹಿಸಿದ್ದಾರೆ.

ಜಗತ್ತಿನ ಅತ್ಯಂತ ದೊಡ್ಡ ಸಮುದಾಯವಾಗಿರುವ ಕ್ರೈಸ್ತರು ದೇಶದಲ್ಲಿ ಶಿಕ್ಷಣ, ಆರೋಗ್ಯ, ಸಮಾಜ ಸೇವೆಯಲ್ಲಿ ಕೊಟ್ಟ ಕೊಡುಗೆ ಅಪಾರವಾಗಿದೆ. ಜಾತ್ಯತೀತ ಭಾರತದ ಘನತೆ ಗೌರವಕ್ಕೆ ಧಕ್ಕೆ ತರುವ ರೀತಿಯಲ್ಲಿ ಸಂಸದರು ನೀಡಿದ ಹೇಳಿಕೆ ಈ ದೇಶಕ್ಕೆ ಅವಮಾನವಾಗಿದೆ. ಆದುದರಿಂದ, ಬಿಜೆಪಿ ಪಕ್ಷ ಮತ್ತು ಸರಕಾರ ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News