ಸಿದ್ದರಾಮಯ್ಯ ನಿವಾಸದಲ್ಲಿ ಕಾಂಗ್ರೆಸ್ ನಾಯಕರ ಸಭೆ

Update: 2021-03-02 17:52 GMT

ಬೆಂಗಳೂರು, ಮಾ.2: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ಬಹಿರಂಗವಾಗಿ, ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪಕ್ಷದ ವತಿಯಿಂದ ಯಾವ ರೀತಿ ಹೋರಾಟ ರೂಪಿಸಬೇಕು ಎಂಬುದರ ಕುರಿತು ಚರ್ಚೆ ನಡೆಸಿದರು.

ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ಸಂಬಂಧಿಸಿದಂತೆ ನಡೆದಿರುವ ಬೆಳವಣಿಗೆಗಳ ಕುರಿತು ಶಾಸಕ ತನ್ವೀರ್ ಸೇಠ್ ತಮ್ಮನ್ನು ಭೇಟಿ ಮಾಡಿ ಚರ್ಚೆ ನಡೆಸಿದ ಬಳಿಕ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯರನ್ನು ಭೇಟಿ ಮಾಡಿದರು. ಇದೇ ವೇಳೆ, ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ, ಈ ಸಂಬಂಧ ಯಾವ ರೀತಿ ಹೋರಾಟ ರೂಪಿಸಬೇಕು ಎಂಬುದರ ಬಗ್ಗೆಯೂ ಚರ್ಚೆ ನಡೆಸಲಾಗಿದೆ.

ನಾಳೆ(ಮಾ.3) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಆಯೋಜಿಸಿರುವ ‘ಜನಧ್ವನಿ’ ಕಾರ್ಯಕ್ರಮದಲ್ಲಿಯೂ ಈ ವಿಷಯವನ್ನು ಮುಂದಿಟ್ಟುಕೊಂಡು ಸರಕಾರದ ವಿರುದ್ಧ ಹೋರಾಟ ಮಾಡಲು ಕಾಂಗ್ರೆಸ್ ನಾಯಕರು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸಭೆಯಲ್ಲಿ ಮಾಜಿ ಸಚಿವರಾದ ಎಂ.ಬಿ.ಪಾಟೀಲ್, ನಸೀರ್ ಅಹ್ಮದ್, ಝಮೀರ್ ಅಹ್ಮದ್ ಖಾನ್ ಸೇರಿದಂತೆ ಇನ್ನಿತರ ಮುಖಡರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News