ಹೆಬ್ರಿ: ಬೈಕ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಜಿಂಕೆ ಮೃತ್ಯು

Update: 2021-03-03 06:45 GMT

ಹೆಬ್ರಿ, ಮಾ.3: ಬೈಕ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಜಿಂಕೆಯೊಂದು ಮೃತಪಟ್ಟ ಘಟನೆ ಮಾ.3ರಂದು ಬೆಳಗ್ಗೆ 6:45ರ ಸುಮಾರಿಗೆ ಕನ್ಯಾನ ರಾಷ್ಟ್ರೀಯ ಹೆದ್ದಾರಿ 169ಎಯಲ್ಲಿ ನಡೆದಿದೆ.

ಖಾಸಗಿ ಬಸ್ ಚಾಲಕ ಹರೀಶ್ ಎಂಬವರು ಚಲಾಯಿಸುತ್ತಿದ್ದ ಬೈಕ್, ರಸ್ತೆ ದಾಟುತ್ತಿದ್ದ ಜಿಂಕೆಗೆ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಬಳಿಕ ನಿಯಂತ್ರಣ ಕಳೆದುಕೊಂಡ ಬೈಕ್ ರಸ್ತೆ ಬದಿಗೆ ಉರುಳಿಬಿದ್ದಿದೆ.

ಈ ಅಪಘಾತದಿಂದ ಗಂಭೀರವಾಗಿ ಗಾಯಗೊಂಡ ಜಿಂಕೆ ಸ್ಥಳದಲ್ಲೇ ಅಸುನೀಗಿದೆ. ಈ ನಡುವೆ ರಸ್ತೆಗೆಸೆಯಲ್ಪಟ್ಟು ತೀವ್ರವಾಗಿ ಗಾಯಗೊಂಡಿರುವ ಬೈಕ್ ಸವಾರ ಹರೀಶ್ ಆಸ್ಪತ್ರೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸ್ಥಳಕ್ಕೆ ಹೆಬ್ರಿ ಪೊಲೀಸರು ಹಾಗೂ ಹೆಬ್ರಿ ವಲಯ ಅರಣ್ಯಾಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News