ಇನ್ನೂ ಮೂವರು ಪ್ರಭಾವಿ ರಾಜಕಾರಣಿಗಳ ಅಶ್ಲೀಲ ವೀಡಿಯೊಗಳಿವೆ ಎಂದ ದಿನೇಶ್ ಕಲ್ಲಹಳ್ಳಿ !

Update: 2021-03-03 13:45 GMT

ಬೆಂಗಳೂರು, ಮಾ.3: ಶಾಸಕ ರಮೇಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಅಶ್ಲೀಲ ವೀಡಿಯೊ ಹೊರತುಪಡಿಸಿ 'ಇನ್ನೂ ಮೂವರು ಪ್ರಭಾವಿ ರಾಜಕಾರಣಿಗಳ ಅಶ್ಲೀಲ ವೀಡಿಯೊಗಳಿವೆ' ಎಂದು ನಾಗರಿಕ ಹಕ್ಕು ಹೋರಾಟ ಸಮಿತಿಯ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಹೇಳಿದ್ದಾರೆ.

ಖಾಸಗಿ ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿರುವ ದಿನೇಶ್ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದ ಸಚಿವ ಸಂಪುಟದಲ್ಲಿ ಇರುವ ಒಬ್ಬ ಸಚಿವರಿಗೆ ಸಂಬಂಧಿಸಿದ ಹಾಗೂ ಸರಕಾರದ ಉನ್ನತ ಹುದ್ದೆಯಲ್ಲಿ ಇರುವ ಇಬ್ಬರು ಪ್ರಭಾವಿ ರಾಜಕಾರಣಿಗಳ ಅಶ್ಲೀಲ ವೀಡಿಯೊಗಳು ನನ್ನ ಬಳಿ ಇವೆ. ಕಾನೂನು ತಜ್ಞರೊಂದಿಗೆ ಚರ್ಚಿಸಿದ ಬಳಿಕ ಆ ವಿಡಿಯೊಗಳಿಗೆ ಸಂಬಂಧಿಸಿದಂತೆ ದೂರು ನಿಡುತ್ತೇನೆ ಎಂದು ತಿಳಿಸಿದರು.

ಶಾಸಕ ರಮೇಶ್ ಜಾರಕಿಹೊಳಿಗೆ ಸಂಬಂಧಿಸಿದ ಅಶ್ಲೀಲ ವಿಡಿಯೊಗಳ ತುಣುಕುಗಳನ್ನು ತನಿಖೆಗಾಗಿ ನೀಡಲಾಗಿದೆ. ಮುಖ್ಯಮಂತ್ರಿಗಳು ಜಾರಕಿಹೊಳಿ ಅವರಿಂದ ರಾಜೀನಾಮೆ ಪಡೆದು ಉತ್ತಮ ಕೆಲಸ ಮಾಡಿದ್ದಾರೆ ಎಂದು ತಿಳಿಸಿದರು.

ನನಗೆ ಕಾಂಗ್ರೆಸ್ ನಾಯಕರ ಯಾರ ಪರಿಚಯವೂ ಇಲ್ಲ. 10 ವರ್ಷದಿಂದ ಸಾಮಾಜಿಕ ಹೋರಾಟಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಸಂತ್ರಸ್ತರ ಪರವಾಗಿ ಸದಾ ನಾನು ಹೋರಾಟ ನಡೆಸುತ್ತೇನೆ ಎಂದು ದಿನೇಶ್ ತಿಳಿಸಿದ್ದಾರೆ.   

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News