ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2021-03-03 16:14 GMT

ಶಂಕರನಾರಾಯಣ, ಮಾ.3: ವಿಪರೀತ ಮದ್ಯ ಸೇವನೆ ಚಟ ಹೊಂದಿದ್ದ ಅಂಪಾರು ಗ್ರಾಮದ ಹಡಾಳಿ ಅಚ್ಚೆಬೆಟ್ಟು ನಿವಾಸಿ ಪ್ರಭಾಕರ ಶೆಟ್ಟಿ ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು ಮಾ.2ರಂದು ಬೆಳಗ್ಗೆ ಅಂಪಾರು ಗ್ರಾಮದ ಹಡಾಳಿ ಎಂಬಲ್ಲಿನ ಸರಕಾರಿ ಕಾಡಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ: ವಿಪರೀತ ಮದ್ಯವ್ಯಸನಿಯಾಗಿದ್ದ ಕುಕ್ಕುಂದುರು ಗ್ರಾಮದ ಅಶ್ವತಪುರ ರಸ್ತೆಯ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ನಿವಾಸಿ ಚಂದ್ರಶೇಖರ ಎನ್. ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಫೆ.28ರ ಸಂಜೆಯಿಂದ ಮಾ.2ರ ಮಧ್ಯಾಹ್ನ ಮಧ್ಯಾವಧಿಯಲ್ಲಿ ಮನೆಯ ಬೆಡ್‌ರೂಮ್‌ನಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News