ಮೂರು ತಿಂಗಳ ಕಾಲ ಬೆಳಗ್ಗೆ- ಸಂಜೆ ಬಿಸಿಲಿನ ತಾಪಮಾನ ಹೆಚ್ಚಾಗಿರಲಿದೆ: ಹವಾಮಾನ ಇಲಾಖೆ

Update: 2021-03-03 16:25 GMT

ಬೆಂಗಳೂರು, ಮಾ.3: ಕಳೆದ ನಾಲ್ಕೈದು ದಿನಗಳಿಂದ ರಾಜ್ಯದಲ್ಲಿ ಬಿಸಿಲಿನ ಪ್ರಮಾಣ ನಿಧಾನವಾಗಿ ಹೆಚ್ಚಾಗಿ ತಾಪಮಾನದ ಬಿಸಿ ತಟ್ಟುತ್ತಿದೆ. ಈ ಬಾರಿ ಬೆಳಗ್ಗೆ ಮತ್ತು ಸಂಜೆ ವೇಳೆಯಲ್ಲಿಯೇ ಬಿಸಿಲಿನ ದಗೆ ಹೆಚ್ಚಾಗಿರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮಾರ್ಚ್-ಮೇವರೆಗೂ ತಾಪಮಾನ ಹೆಚ್ಚಾಗಿ ಇರಲಿದೆ. ಮೋಡ ಕವಿದ ವಾತಾವರಣ ಇದ್ದರೂ ಹಗಲಿನ ಹಾಗೂ ರಾತ್ರಿ ಸಮಯದಲ್ಲಿ ಹೆಚ್ಚಿನ ತಾಪಮಾನ ಇರುತ್ತದೆ ಎಂದು ಹವಾಮಾನ ಇಲಾಖೆಯ ಇಲಾಖೆ ನಿರ್ದೇಶಕ ಸಿಎಸ್ ಪಾಟೀಲ್ ಅವರು ಹೇಳಿದ್ದಾರೆ.

ಮಾರ್ಚ್ ನಿಂದ ಮೇವರೆಗೂ ಉತ್ತರ, ಈಶಾನ್ಯ, ಪೂರ್ವ ಮತ್ತು ಪಶ್ಚಿಮ ಭಾರತದ ಕೆಲವು ಭಾಗಗಳಲ್ಲಿ ಹೆಚ್ಚಾಗಿ ಬೇಸಿಗೆ ಶುರುವಾಗಲಿದ್ದು, ದಕ್ಷಿಣ ಮತ್ತು ಮಧ್ಯ ಭಾರತದ ಸಾಮಾನ್ಯ ತಾಪಮಾನಕ್ಕಿಂತ ಕಡಿಮೆ ಇರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ಮುಂಬರುವ ಬಿಸಿ ಹವಾಮಾನ(ಋತುವಿನ ಮಾರ್ಚ್ ನಿಂದ ಮೇ), ಛತ್ತೀಸ್‍ಗಡ, ಒಡಿಶಾ, ಗುಜರಾತ್, ಕರಾವಳಿ ಮಹಾರಾಷ್ಟ್ರ, ಗೋವಾ ಮತ್ತು ಕರಾವಳಿ ಆಂಧ್ರಪ್ರದೇಶಗಳಲ್ಲಿ ಗರಿಷ್ಠ ತಾಪಮಾನಕ್ಕಿಂತ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News