ವಿವಾಹಿತ ಮಹಿಳೆ ನಾಪತ್ತೆ : ದೂರು

Update: 2021-03-04 05:34 GMT

ಉಳ್ಳಾಲ : ಒಂಭತ್ತು ಕರೆ ನಿವಾಸಿ ವಿವಾಹಿತ ಮಹಿಳೆಯೋರ್ವರು ನಾಪತ್ತೆಯಾಗಿರುವ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇಲ್ಲಿನ ನಿವಾಸಿ ಇಬ್ರಾಹಿಂ ಎಂಬವರ ಪುತ್ರಿ ಹಿನಾಝ (25) ನಾಪತ್ತೆಯಾದ ಮಹಿಳೆ. ಅವರು ಮಂಗಳವಾರ ಆಸ್ಪತ್ರೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದವರು ಮತ್ತೆ ವಾಪಸ್ ಬಾರದೆ ನಾಪತ್ತೆ ಆಗಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಇಬ್ರಾಹಿಂ ನೀಡಿದ ದೂರಿನಂತೆ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News