"ರಾಜ್ಯದಲ್ಲಿ ಹಲವು ಸಮಸ್ಯೆಗಳಿದ್ದರೂ, ಕಲಾಪದಲ್ಲಿ ಒಂದು ದೇಶ-ಒಂದು ಚುನಾವಣೆ ಕುರಿತು ಚರ್ಚೆ": ಡಿಕೆಶಿ ಆಕ್ರೋಶ

Update: 2021-03-04 07:33 GMT

ಬೆಂಗಳೂರು : ರಾಜ್ಯದಲ್ಲಿ ಹಲವು ಸಮಸ್ಯೆಯಿದ್ದರೂ, ರಾಜ್ಯ ವಿಧಾನ ಮಂಡಲ ಕಲಾಪದಲ್ಲಿ ‘ಒಂದು ದೇಶ-ಒಂದು ಚುನಾವಣೆ' ಚರ್ಚೆ ನಡೆಯುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಒಂದು ದೇಶ-ಒಂದು ಚುನಾವಣೆ’ ಬಗ್ಗೆ ಚರ್ಚೆಯಿದೆ. ಇದರ ಚರ್ಚೆಗೆ ಅವಕಾಶ ಕೊಟ್ಟಿದ್ದು ಯಾರು? ಕೇಂದ್ರ ಸರಕಾರವೇನಾದರೂ ಇದನ್ನು ಮಾಡಿ ಎಂದಿದೆಯೇ ಎಂದು ಅವರು ಪ್ರಶ್ನಿಸಿದರು.

ಇವತ್ತು ರಾಜ್ಯದಲ್ಲಿ ಏನೇನು ಸಮಸ್ಯೆಯಿದೆ. ಈ ಸಮಸ್ಯೆಗಳ ಬಗ್ಗೆ ಯಾಕೆ ಚರ್ಚೆ ಮಾಡಬಾರದು ಎಂದ ಅವರು, ದುಡ್ಡು ಕೊಟ್ಟು ಶಾಸಕರನ್ನು ಖರೀದಿ ಮಾಡಿದ್ದಾರೆ. ಇವರಿಗೆ ಇನ್ಯಾವ ಮೌಲ್ಯವಿದೆ ಎಂದು ಅವರು ಪ್ರಶ್ನಿಸಿದರು.

ಈಗ ‘ಒಂದು ದೇಶ-ಒಂದು ಚುನಾವಣೆ’ ಎನ್ನುತ್ತಿದ್ದಾರೆ. ಇದನ್ನು ಯಾರ ಒತ್ತಡದ ಮೇಲೆ ತಂದಿದ್ದಾರೆ. ಇದರ ಬಗ್ಗೆ ಸಿಎಲ್ ಪಿ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ಇದನ್ನು ನಾವು ವಿರೋಧಿಸುತ್ತಿದ್ದೇವೆ ಎಂದು ಡಿಕೆಶಿ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News