ಪುತ್ತೂರು : ಮಣ್ಣಿನಡಿಯಲ್ಲಿ ಸಿಲುಕಿದ್ದ ಇಬ್ಬರು ಕಾರ್ಮಿಕರು ಮೃತ್ಯು

Update: 2021-03-04 07:50 GMT

ಪುತ್ತೂರು: ಅರ್ಲಪದವು ಸಮೀಪ ಕಡಮ್ಮಾಜೆಯಲ್ಲಿ  ಕೋಳಿ ತ್ಯಾಜ್ಯ ವಿಲೇವಾರಿ ಗುಂಡಿ ನಿರ್ಮಾಣದ ವೇಳೆ ಗುಡ್ಡ ಕುಸಿತದಿಂದ ಮಣ್ಣಿನಡಿಯಲ್ಲಿ ಸಿಲುಕಿದ್ದ ಇಬ್ಬರು ಕಾರ್ಮಿಕರು ಮೃತಪಟ್ಟ ಬಗ್ಗೆ ವರದಿಯಾಗಿದೆ.

ಕಡಮ್ಮಾಜೆ ಹಾಜಿ ಅಬ್ದುಲ್ಲಾ ಅವರಿಗೆ ಸೇರಿದ ಕೋಳಿ ಫಾರ್ಮ್‌ನ ತ್ಯಾಜ್ಯ ವಿಲೇವಾರಿಗೆ ಸಂಬಂಧಪಟ್ಟಂತೆ ಜೆಸಿಬಿ ಮೂಲಕ ಹೊಂಡ ತೆಗೆಯುವ ಕೆಲಸ ನಡೆಸಲಾಗುತ್ತಿತ್ತು.

ಈ ಸಂದರ್ಭದಲ್ಲಿ ಕೂಲಿ ಕಾರ್ಮಿಕರಾದ ಪಾರ್ಪಳ್ಳ ನಿವಾಸಿಗಳಾದ ಬಾಬು ಮತ್ತು ರವಿ ಎಂಬವರು ಹೊಂಡದ ಒಳಗೆ ಬಿದ್ದಿದ್ದು, ಬಳಿಕ ಇವರ ಮೇಲೇಯೇ ಮಣ್ಣು ಕೂಡ ಕುಸಿದು ಬಿದ್ದ ಪರಿಣಾಮವಾಗಿ ಮಣ್ಣಿನಡಿ ಸಿಲುಕಿದ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಸಂಪ್ಯ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News