ಪಾ.ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಗೆ ಆರೋಗ್ಯಪ್ಪ, ಜಾಣಗೆರೆ ವೆಂಕಟರಾಮಯ್ಯ ಆಯ್ಕೆ

Update: 2021-03-04 18:09 GMT
ಆರೋಗ್ಯಪ್ಪ, ಜಾಣಗೆರೆ ವೆಂಕಟರಾಮಯ್ಯ

ಬೆಂಗಳೂರು, ಮಾ.4: ಕನ್ನಡ ಸಾಹಿತ್ಯ ಪರಿಷತ್ ಕೊಡಮಾಡುವ 2021ನೇ ಸಾಲಿನ ಫಾ.ಚಸರಾ ಕನ್ನಡ ಸಂಸ್ಕøತಿ ದತ್ತಿ ಪ್ರಶಸ್ತಿಗೆ ಕನ್ನಡಪರ ಹೋರಾಟಗಾರ ಎ.ಆರೋಗ್ಯಪ್ಪ ಹಾಗೂ ಹಿರಿಯ ಪತ್ರಕರ್ತ ಜಾಣಗೆರೆ ವೆಂಕಟರಾಮಯ್ಯ ಆಯ್ಕೆಯಾಗಿದ್ದಾರೆ. 

ಗುರುವಾರ ಕನ್ನಡ ಸಾಹಿತ್ಯ ಪರಿಷತ್‍ನಲ್ಲಿ ಅಧ್ಯಕ್ಷ ಮನು ಬಳಿಗಾರ್ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ಆರೋಗ್ಯಪ್ಪ, ಜಾಣಗೆರೆ ವೆಂಕಟರಾಮಯ್ಯರನ್ನು ಚಸರಾ ಪ್ರಶಸ್ತಿ ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು 10ಸಾವಿರ ರೂ.ನಗದು, ಸ್ಮರಣಿಕೆಯನ್ನು ಒಳಗೊಂಡಿರುತ್ತದೆ. ಆಯ್ಕೆ ಸಮಿತಿ ಸಭೆಯಲ್ಲಿ ಕಸಾಪ ಗೌರವ ಕಾರ್ಯದರ್ಶಿ ಡಾ.ಪದ್ಮರಾಜ ದಂಡಾವತಿ, ಕೆ.ರಾಜಕುಮಾರ್, ಗೌರವ ಕೋಶಾಧ್ಯಕ್ಷ ಮಲ್ಲಿಕಾರ್ಜುನಪ್ಪ ಉಪಸ್ಥಿತರಿದ್ದರೆಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News