ಜಮ್ಮು-ಕಾಶ್ಮೀರ: ಭಾರತದ ಕ್ರಮಗಳನ್ನು ಸ್ವಾಗತಿಸಿದ ಅಮೆರಿಕ

Update: 2021-03-04 18:22 GMT

ವಾಶಿಂಗ್ಟನ್, ಮಾ. 4: ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು ಮತ್ತು ಕಾಶ್ಮೀರಕ್ಕೆ ಭಾರತೀಯ ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಅನುಗುಣವಾಗಿ ಸಂಪೂರ್ಣ ಆರ್ಥಿಕ ಮತ್ತು ರಾಜಕೀಯ ಸ್ವಾತಂತ್ರ್ಯಗಳನ್ನು ಮರಳಿಸಲು ಭಾರತ ತೆಗೆದುಕೊಂಡಿರುವ ಕ್ರಮಗಳನ್ನು ಅಮೆರಿಕ ಬುಧವಾರ ಶ್ಲಾಘಿಸಿದೆ.

ಅದೇ ವೇಳೆ, ಜಮ್ಮು ಮತ್ತು ಕಾಶ್ಮೀರದಲ್ಲಿನ ಬೆಳವಣಿಗೆಯ ಮೇಲೆ ಅಮೆರಿಕ ನಿಕಟ ನಿಗಾ ಇಡಲಿದೆ ಎಂದು ಅಮೆರಿಕದ ವಿದೇಶಾಂಗ ಇಲಾಖೆಯ ವಕ್ತಾರ ನೆಡ್ ಪ್ರೈಸ್ ಹೇಳಿದರು.

ಕಾಶ್ಮೀರಕ್ಕೆ ಸಂಬಂಧಿಸಿದ ಅಮ್ಟೆರಿಕದ ನೀತಿಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದು ತನ್ನ ದೈನಂದಿನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರೈಸ್ ಹೇಳಿದರು.

‘‘ಅಮೆರಿಕವು ಭಾರತ ಮತ್ತು ಪಾಕಿಸ್ತಾನಗಳೊಂದಿಗೆ ಮಹತ್ವದ ಸಂಬಂಧಗಳನ್ನು ಹೊಂದಿದೆ. ಈ ಸಂಬಂಧಗಳಿಗೆ ಅವುಗಳದ್ದೇ ಆದ ಮಹತ್ವವಿದೆ’’ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News