ಮಾದಕ ವಸ್ತು ಸಾಗಾಟ ಆರೋಪ: ಬಿಗ್ ಬಾಸ್ ಸ್ಪರ್ಧಿ ಮಸ್ತಾನ್ ಚಂದ್ರ ಮನೆ ಮೇಲೆ ಪೊಲೀಸರ ದಾಳಿ

Update: 2021-03-05 08:52 GMT

ಬೆಂಗಳೂರು : ಮಾದಕ ವಸ್ತು ಸಾಗಾಟ ಆರೋಪ ಸಂಬಂಧ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಬಿಗ್ ಬಾಸ್  ಕಾರ್ಯಕ್ರಮದ ಸ್ಪರ್ಧಿಯಾಗಿದ್ದ ಮಸ್ತಾನ್ ಚಂದ್ರ ಯಾನೆ ಮಸ್ತಾನ್ ಮನೆ ಮೇಲೆ ಗೋವಿಂದಪುರ ಠಾಣೆ ಪೊಲೀಸರು ದಾಳಿ ನಡೆಸಿ, ಪರಿಶೀಲಿಸಿರುವುದಾಗಿ ವರದಿಯಾಗಿದೆ.

ಶುಕ್ರವಾರ ಬೆಳಗ್ಗೆ ಬಾಣಸವಾಡಿ ಉಪವಿಭಾಗದ ಎಸಿಪಿ ಸಕ್ರಿ ನೇತೃತ್ವದ ತಂಡ ಸಂಜಯ್ ನಗರದಲ್ಲಿರುವ ಮಸ್ತಾನ್ ಮನೆ ಮೇಲೆ ದಾಳಿ ಮಾಡಿತ್ತು ಎಂದು ತಿಳಿದುಬಂದಿದೆ.

ಸದ್ಯ ಮಸ್ತಾನ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಈ ಕುರಿತು ಹೆಚ್ಚಿನ ಮಾಹಿತಿ ಸದ್ಯಕ್ಕೆ ಲಭ್ಯವಾಗಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News