ಅರ್ನಬ್ ಗೋಸ್ವಾಮಿಗೆ ಬಂಧನದಿಂದ ಮಧ್ಯಂತರ ರಕ್ಷಣೆ ವಿಸ್ತರಿಸಿದ ಬಾಂಬೆ ಹೈಕೋರ್ಟ್

Update: 2021-03-05 14:22 GMT

ಮುಂಬೈ: ರಿಪಬ್ಲಿಕ್ ಟಿವಿ ಮುಖ್ಯ ಸಂಪಾದಕ ಅರ್ನಬ್ ಗೋಸ್ವಾಮಿ ವಿರುದ್ಧ 2018ರ ಮೇ ನಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಬಂಧನದಿಂದ ಮಧ್ಯಂತರ ರಕ್ಷಣೆಯನ್ನು ಬಾಂಬೆ ಹೈಕೋರ್ಟ್ ಶುಕ್ರವಾರ ವಿಸ್ತರಿಸಿದೆ ಎಂದು the indian express ವರದಿ ಮಾಡಿದೆ.

ಗೋಸ್ವಾಮಿಗೆ ಎಪ್ರಿಲ್ 16ರ ತನಕ ಅಲಿಬಾಗ್ ನ್ಯಾಯಾಲಯಕ್ಕೆ ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ನೀಡಲಾಗಿದೆ.

ಈ ಪ್ರಕರಣದಲ್ಲಿ ಮಾರ್ಚ್ 10ರಂದು ಹಾಜರಾಗುವಂತೆ ಮುಖ್ಯ ಜ್ಯುಡಿಶಿಯಲ್ ಮ್ಯಾಜಿಸ್ಟ್ರೇಟ್ ಗೋಸ್ವಾಮಿಗೆ ಸಮನ್ಸ್ ನೀಡಿದ್ದಾರೆ. ಹಾಜರಾತಿಯಿಂದ ವಿನಾಯಿತಿ ನೀಡಲು ಅವರು ನಿರಾಕರಿಸಿದ್ದಾರೆ ಎಂದು livelaw.in ವರದಿ ಮಾಡಿತ್ತು. ಶುಕ್ರವಾರದ ಆದೇಶದಿಂದಾಗಿ ಪತ್ರಕರ್ತ ಗೋಸ್ವಾಮಿ ಈಗ ನ್ಯಾಯಾಲಯಕ್ಕೆ ಹಾಜರಾಗಬೇಕಾಗಿಲ್ಲ.

ಗೋಸ್ವಾಮಿ, ಇನ್ನಿಬ್ಬರಾದ ಫಿರೋಝ್ ಶೇಖ್ ಹಾಗೂ ನಿತೀಶ್ ಸರ್ದಾ ವಿರುದ್ಧ 53 ವರ್ಷದ ಇಂಟೀರಿಯರ್ ಡಿಸೈನರ್ ಅನ್ವಯ್ ನಾಯಕ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಹೊರಿಸಲಾಗಿತ್ತು. ನಾಯಕ್ ಹಾಗೂ ಅವರ ತಾಯಿ ಕುಮುದ್ 2018ರ ಮೇ ನಲ್ಲಿ ಅಲಿಬಾಗ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News