ಟೊಯೋಟಾ ಕಾರ್ಖಾನೆ ಬಿಕ್ಕಟ್ಟು ಪರಿಹಾರ: ಸಚಿವ ಜಗದೀಶ್ ಶೆಟ್ಟರ್ ಗೆ ಆಡಳಿತ ಮಂಡಳಿ ಧನ್ಯವಾದ

Update: 2021-03-05 12:17 GMT

ಬೆಂಗಳೂರು, ಮಾ. 5: ರಾಮನಗರ ಜಿಲ್ಲೆ ಬಿಡದಿಯ ಕೈಗಾರಿಕಾ ಪ್ರದೇಶದಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಾರ್ಖಾನೆ ಆಡಳಿತ ಮಂಡಳಿ ಹಾಗೂ ಕಾರ್ಮಿಕರ ಮಧೆ ಉದ್ಭವಿಸಿದ್ದ ಸಮಸ್ಯೆಗಳ ಪರಿಹಾರದಲ್ಲಿ ಪ್ರಮುಖ ಪಾತ್ರ ವಹಿಸಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರನ್ನು ಕಾರ್ಖಾನೆಯ ಆಡಳಿತ ಮಂಡಳಿಯ ಅಧಿಕಾರಿಗಳು ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ್ದಾರೆ.

2020 ನವೆಂಬರ್ 9ರಂದು ಪ್ರಾರಂಭವಾದ ಕಾರ್ಮಿಕರ ಮುಷ್ಕರದ ಸಂದರ್ಭದಲ್ಲಿ ಸಚಿವ ಜಗದೀಶ್ ಶೆಟ್ಟರ್ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದರು. ಮುಷ್ಕರ ಮುಂದುವರಿದಾಗ ಆ ಪ್ರದೇಶದ ಜನಪ್ರತಿನಿಧಿಗಳು ಹಾಗೂ ಕೈಗಾರಿಕಾ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ 2 ಬಾರಿ ಸಭೆಯನ್ನು ನಡೆಸಿದ್ದರು. ಅಲ್ಲದೆ, ಹಲವು ಬಾರಿ ಸಚಿವರನ್ನು ಭೇಟಿಯಾಗಿದ್ದ ಕಾರ್ಮಿಕ ಸಂಘಟನೆಗಳ ನಿಯೋಗ ಹಾಗೂ ಅಧಿಕಾರಿಗಳ ತಂಡಕ್ಕೆ ಸಚಿವರು ಸಮಸ್ಯೆಯ ಪರಿಹಾರಕ್ಕೆ ಸಲಹೆ ಹಾಗೂ ಸೂಚನೆಗಳನ್ನು ನೀಡಿದ್ದರು.

ಸಮಸ್ಯೆ ಇನ್ನು ಮುಂದುವರಿದಾಗ ಕಾರ್ಮಿಕ ಸಂಘಟನೆಯ ಮುಖಂಡರುಗಳು ಭೇಟಿ ಮಾಡಿ ಸಲಹೆ ಸೂಚನೆಯನ್ನು ಪಡೆದುಕೊಂಡಿದ್ದರು. ಅಲ್ಲದೆ, ಮುಷ್ಕರದ ವೇಳೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಅಧಿಕಾರಿಗಳು ಬಹಳಷ್ಟು ಸಹಾಯವನ್ನು ಮಾಡಿದ್ದಾರೆ. ಇದಕ್ಕೆ ಸಚಿವ ಜಗದೀಶ್ ಶೆಟ್ಟರ್ ಅವರ ಸೂಚನೆಗಳು ಕಾರಣವಾಗಿದ್ದವು ಎಂದು ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News