ಮಾ.6ರಿಂದ ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣ ಪ್ರದರ್ಶನ, ಮಾರಾಟ

Update: 2021-03-05 13:40 GMT

ಉಡುಪಿ, ಮಾ.5: ಮಲಬಾರ್  ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನ ಉಡುಪಿ ಶಾಖೆಯಲ್ಲಿ ‘ಆರ್ಟಿಸ್ಟ್ರಿ’ ಕಲಾತ್ಮಕ ಚಿನ್ನಾಭರಣಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳವು ಮಾ.6 ರಿಂದ ಮಾ.14ರವರೆಗೆ ನಡೆಯಲಿದೆ ಎಂದು ಮಲಬಾರ್ ಉಡುಪಿ ಶಾಖೆಯ ರಾಘವೇಂದ್ರ ನಾಯಕ್ ತಿಳಿಸಿದ್ದಾರೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣಗಳ ಪ್ರದರ್ಶನದಲ್ಲಿ ವಿವಿಧ ನಮೂನೆಯ ಚಿನ್ನ ಮತ್ತು ವಜ್ರಾಭರಣಗಳ ಸಂಗ್ರಹಗಳಿವೆ. ‘ಮೈನ್’ನಲ್ಲಿ ವಜ್ರಾಭರಣಗಳ ಅಭೂತ ಪೂರ್ವ ಸಂಗ್ರಹ, ನವವಧುವಿನ ವಿಶಿಷ್ಟ ಸಂಗ್ರಹ ಹಾಗೂ ಪ್ರಮಾಣಿಕೃತ ವಜ್ರಾಭರಣಗಳಿವೆ. ‘ಡಿವೈನ್’ನಲ್ಲಿ ಭಾರತೀಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಚಿನ್ನಾಭರಣಗಳ ಸಂಗ್ರಹವಿದೆ.

‘ಪ್ರಶಿ’  ಯಲ್ಲಿ ರುಬಿ, ಎಮರಾಲ್ ಅಮೂಲ್ಯ ಹರಳುಗಳ ಸಮಕಾಲೀನ ಚಿನ್ನಾಭರಣಗಳ ಸಂಗ್ರಹವಿದ್ದು , ‘ಎಥಿನಿಕ್ಸ್’ನಲ್ಲಿ ಕೈಕುಶಲತೆಯ ಸೊಬಗಿನ ಪಾರಂಪರಿಕ ಚಿನ್ನಾಭರಣಗಳ ಪ್ರದರ್ಶನ ಹಾಗೂ ಮಾರಾಟವಿದೆ. ‘ಏರ’ ಅನ್ನಟ್ ಡೈಮಂಡ್ಸ್ ಹಾಗೂ ಚಿನ್ನಾಭರಣಗಳ ಅಪೂರ್ವ ಸಂಗ್ರಹವಾದರೆ ‘ಹಾಯ್’ನಲ್ಲಿ ಯುವತಿಯರ ಮನಸೆಳೆಯುವ ಮನಮೋಹಕ ಆಭರಣಗಳಿವೆ. ‘ ಸ್ಟಾರ್ಲೆಟ್’ನಲ್ಲಿ ಚಿಕ್ಕಮಕ್ಕಳಿಗಾಗಿ ಅತ್ಯಾಕರ್ಷಕ ವಿನ್ಯಾಸ ಗಳಿಂದ ಕೂಡಿದ ಚಿನ್ನಾಭರಣಗಳು ಈ ಪ್ರದರ್ಶನದ ವಿಶೇಷವಾಗಿದೆ ಎಂದವರು ವಿವರಿಸಿದರು.

ಈ ಪ್ರದರ್ಶನ ಹಾಗೂ ಮಾರಾಟ ಮೇಳದಲ್ಲಿ ಸಂಪೂರ್ಣ ಪಾರದರ್ಶಕ, ಉಚಿತ ನಿರ್ವಹಣೆ, ವಿನಿಮಯದಲ್ಲಿ ಶೂನ್ಯ ಕಡಿತ, ಬೈಬ್ಯಾಕ್ ಗ್ಯಾರಂಟಿ, ಉಚಿತ ವಿಮೆ ಇರುತ್ತದೆ. ಎಲ್ಲಾ ಆಭರಣಗಳು ಸಹ ಹಾಲ್ ಮಾರ್ಕ್ ಹೊಂದಿದ್ದು, 28 ರೀತಿಯ ಪರೀಕ್ಷೆ ಮಾಡಿದ ವಜ್ರಾಭರಣಗಳು ಮಲಬಾರ್ ಗೋಲ್ ಆ್ಯಂಡ್ ಡೈಮಂಡ್ಸ್ನ ವಿಶೇಷತೆಗಳಾಗಿವೆ ಎಂದು ರಾಘವೇಂದ್ರ ನಾಯಕ್ ತಿಳಿಸಿದ್ದಾರೆ.

ಶನಿವಾರ ಅಪರಾಹ್ನ 3 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಹಲವು ಗಣ್ಯರು ಭಾಗವಹಿಸಲಿದ್ದಾರೆ. ಸಂಸ್ಥೆಯ ವತಿಯಿಂದ ಮಾ.8ರ ಸೋಮವಾರ ವಿಶ್ವ ಮಹಿಳಾ ದಿನಾಚರಣೆ ನಡೆಯಲಿದ್ದು, ಅಂದು ವಿವಿಧ ಕ್ಷೇತ್ರಗಳ ಆರು ಮಂದಿ ಮಹಿಳಾ ಸಾಧಕಿಯರನ್ನು ಸನ್ಮಾನಿಸಲಾಗು ವುದು ಎಂದು ನಾಯಕ್ ಹೇಳಿದರು. ಸಂಸ್ಥೆಯ ತಂಝಿಮ್ ಶಿರ್ವ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News