ಎಸ್‌ಸಿಎಸ್‌ಟಿ ವಿದ್ಯಾರ್ಥಿಗಳ ಆದಾಯ ಮಿತಿಯಲ್ಲಿ ತಾರತಮ್ಯ ವಿರೋಧಿಸಿ ಪ್ರತಿಭಟನೆ

Update: 2021-03-05 14:27 GMT

ಉಡುಪಿ, ಮಾ.5: ಎಸ್‌ಸಿ ಎಸ್‌ಟಿ ವಿದ್ಯಾರ್ಥಿಗಳ ಆದಾಯ ಮಿತಿ ದೃಢ ಪತ್ರ ನಿಗದಿಪಡಿಸುವಲ್ಲಿ ಸರಕಾರ ಅನುಸರಿಸುತ್ತಿರುವ ತಾರತಮ್ಯ ನೀತಿಯನ್ನು ವಿರೋಧಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಉಡುಪಿ ಜಿಲ್ಲಾ ಶಾಖೆಯ ವತಿಯಿಂದ ಶುಕ್ರವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಟಿ.ಮಂಜುನಾಥ್ ಗಿಳಿಯಾರು, ಸರಕಾರವು ಮೆಟ್ರಿಲ್ ನಂತರದ ವಿದ್ಯಾರ್ಥಿವೇತನ ಮೊತ್ತವನ್ನು ವಾರ್ಷಿಕವಾಗಿ 15ಸಾವಿರ ಕೋಟಿಗೆ ಹೆಚ್ಚಿಸ ಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆದಾಯ ಮಿತಿಯನ್ನು ವಾರ್ಷಿಕ 15ಲಕ್ಷ ರೂ.ಗೆ ಹೆಚ್ಚಿಸಬೇಕು. ಮ್ಯಾನೇಜ್‌ಮೆಂಟ್ ಕೋಟಾದ ಅಡಿ ಯಲ್ಲಿ ಪ್ರವೇಶ ಪಡೆದ ದಲಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಬೇಕು ಎಂದು ಒತ್ತಾಯಿಸಿದರು.

ಬ್ಯಾಕ್‌ಲಾಗ್ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು. ಖಾಸಗಿ ಕ್ಷೇತ್ರ ದಲ್ಲಿ ಮೀಸಲಾತಿ ನೀಡಬೇಕು. ಬೆಲೆ ಏರಿಕೆಗೆ ತಕ್ಕಂತೆ ವಿದ್ಯಾರ್ಥಿ ವೇತನ ಹೆಚ್ಚಿಸ ಬೇಕು. ಹಾಸ್ಟೆಲ್ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹಾಸ್ಟೆಲ್ ಕಟ್ಟಡ ಗಳನ್ನು ಹೆಚ್ಚಿಸಬೇಕು. ಉಚ್ಛ ನ್ಯಾಯಾಲಯ ಹಾಗೂ ಸರ್ವೋಚ್ಚ ನ್ಯಾಯಾ ಲಯಗಳ ನ್ಯಾಯಾಧೀಶರುಗಳ ನೇಮಕಾತಿಯಲ್ಲಿ ಮೀಸಲಾತಿಯನ್ನು ಅನು ಸರಿಸಬೇಕು. ಎಲ್ಲ ಯೋಜನೆಗಳನ್ನು ಜಾರಿಗೊಳಿಸಲು ಏಕಗವಾಕ್ಷಿ ಯೋಜನೆ ಯನ್ನು ಜಾರಿಗೊಳಿಸಬೇಕು ಎಂದು ಅವರು ಆಗ್ರಹಿಸಿದರು.

ಸಮಾಜ ಕಲ್ಯಾಣ ಇಲಾಖೆಯಲ್ಲಿ ಅಧೀನದಲ್ಲಿ ಬರುವ ಎಲ್ಲ ನಿಗಮ ಮಂಡಳಿಗಳಿಗೆ ಸಾಲಕ್ಕಾಗಿ ಅರ್ಜಿ ಸಲ್ಲಿಸುವ ಎಲ್ಲ ಅರ್ಹ ಫಲಾನುಭವಿಗಳಿಗೆ ಸಾಲ ಮಂಜೂರು ಮಾಡಬೇಕು. ಸರಕಾರಿ ಭೂಮಿಯಲ್ಲಿ ಅಕ್ರಮ ಸಾಗು ವಾರಿದಾರರು ಫಾರಂ-57ರಲ್ಲಿ ಸಕ್ರಿಮೀಕರಣಕ್ಕೆ ಅರ್ಜಿ ಸಲ್ಲಿಸಲು ಕಂದಾಯ ಇಲಾಖೆ ಅವಕಾಶ ನೀಡಬೇಕು. 6ನೆ ತರಗತಿ ಸಮಾಜ ವಿಜ್ಞಾನ ಭಾಗ-1ರಲ್ಲಿನ ಪಾಠ-7 ಹೊಸ ಧರ್ಮಗಳ ಉದಯ ಬೋಧನೆ-ಕಲಿಕೆ ವೌಲ್ಯಮಾಪನಕ್ಕೆ ಪರಿಗಣಿಸದಿರುವ ಬಗ್ಗೆ ಶಿಕ್ಷಣ ಸಚಿವರು ಆದೇಶಿಸಿರುವ ಸುತ್ತೋಲೆ ರದ್ದು ಮಾಡಬೆೀಕು ಎಂದು ಅವರು ಒತ್ತಾಯಿಸಿದರು.

ಬಳಿಕ ಈ ಕುರಿತು ಜಿಲ್ಲಾಧಿಕಾರಿ ಜಿ.ಜಗದೀಶ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ದಸಂಸ ರಾಜ್ಯ ಸಮಿತಿ ಸದಸ್ಯ ಜಯನ್ ಮಲ್ಪೆ, ಜಿಲ್ಲಾ ಸಂಘಟನಾ ಸಂಚಾಲಕ ವಾಸುದೇವ ಮುದೂರು, ಕುಂದಾಪುರ ತಾಲೂಕು ಸಂಚಾಲಕ ಕೆ.ಸಿ.ರಾಜು ಬೆಟ್ಟಿನಮನೆ, ಬೈಂದೂರು ತಾಲೂಕು ಸಂಚಾಲಕ ಮಂಜುನಾಥ ಹಳಗೇರಿ, ಮಹಿಳಾ ಸಂಚಾಲಕಿ ಗೀತಾ ಸುರೇಶ್ ಕುಮಾರ್, ಶಂಕರ ಅಜೆಕಾರು, ಗಣೇಶ್ ನೆರ್ಗಿ, ಸಂಜೀವ ಬಳ್ಕೂರು ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News