ರಾಜ್ಯದಲ್ಲಿಂದು 677 ಹೊಸ ಕೊರೋನ ಪ್ರಕರಣ ದೃಢ: ನಾಲ್ವರು ಸೋಂಕಿತರು ಮೃತ್ಯು

Update: 2021-03-05 15:01 GMT

ಬೆಂಗಳೂರು, ಮಾ.5: ರಾಜ್ಯದಲ್ಲಿ ಶುಕ್ರವಾರದಂದು 677 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 4  ಜನರು ಸೋಂಕಿಗೆ ಬಲಿಯಾಗಿದ್ದು, 427 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 9,53,813ಕ್ಕೆ ತಲುಪಿದ್ದು, 112 ಜನ ಸೋಂಕಿತರು ಐಸಿಯುನಲ್ಲಿದ್ದಾರೆ.

ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 12,354ಕ್ಕೆ ತಲುಪಿದೆ. ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 6374ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

ನಾಲ್ವರು ಸೋಂಕಿತರು ಬಲಿ: ಬೆಂಗಳೂರು ನಗರ 2, ಬೀದರ್ 1, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 677 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 2, ಬಳ್ಳಾರಿ 7, ಬೆಳಗಾವಿ 14, ಬೆಂಗಳೂರು ಗ್ರಾಮಾಂತರ 7, ಬೆಂಗಳೂರು ನಗರ 444, ಬೀದರ್ 13, ಚಾಮರಾಜನಗರ 2, ಚಿಕ್ಕಬಳ್ಳಾಪುರ 4, ಚಿಕ್ಕಮಗಳೂರು 2,  ಚಿತ್ರದುರ್ಗ 4, ದಕ್ಷಿಣ ಕನ್ನಡ 20, ದಾವಣಗೆರೆ 3, ಧಾರವಾಡ 10, ಗದಗ 2,  ಹಾಸನ 8, ಹಾವೇರಿ 1, ಕಲಬುರಗಿ 37, ಕೊಡಗು 2, ಕೋಲಾರ 2, ಕೊಪ್ಪಳ 1, ಮಂಡ್ಯ 4, ಮೈಸೂರು 23, ರಾಯಚೂರು 3, ಶಿವಮೊಗ್ಗ 3, ತುಮಕೂರು 28, ಉಡುಪಿ 22, ಉತ್ತರ ಕನ್ನಡ 3, ವಿಜಯಪುರ ಜಿಲ್ಲೆಯಲ್ಲಿ 6 ಪ್ರಕರಣ ಪತ್ತೆಯಾಗಿವೆ.

ರಾಜಧಾನಿಯಲ್ಲಿ 444 ಕೊರೋನ ಪ್ರಕರಣ ದೃಢ

ರಾಜಧಾನಿಯಲ್ಲಿ ಶುಕ್ರವಾರದಂದು 444 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಇಬ್ಬರು ಮೃತಪಟ್ಟಿದ್ದಾರೆ. 208 ಸೋಂಕಿತರು ಬಿಡುಗಡೆಯಾಗಿದ್ದಾರೆ.

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 4,07,269 ಕೊರೋನ ಸೋಂಕಿತರು ದೃಢಪಟ್ಟಿದ್ದು, 4,493 ಜನರು ಸೋಂಕಿಗೆ ಬಲಿಯಾಗಿದ್ದಾರೆ. 3,98,183 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News