ಮಾ.7: ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಉಡುಪಿಗೆ

Update: 2021-03-05 15:03 GMT

ಉಡುಪಿ, ಮಾ.5: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಅವರು ಮಾ.7ರ ರವಿವಾರ ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಗ್ಗೆ 8:30ಕ್ಕೆ ಬ್ರಹ್ಮಾವರದ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡದಲ್ಲಿರುವ ಪಿ.ಎಂ.ಬಿ.ಜೆ.ಕೆಯಲ್ಲಿ ಪ್ರಧಾನ ಮಂತ್ರಿ ಭಾರತೀಯ ಜನ ಔಷಧಿ ದಿವಸ್‌ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಂಗಳೂರಿಗೆ ತೆರಳುವರು.

 ಸಚಿವ ಸುಧಾಕರ ಪ್ರವಾಸ: ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ ಅವರು ಮಾ.7ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಬ್ರಹ್ಮಾವರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಯುವ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ದಿವಸ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದು, ಬಳಿಕ ಮಂಗಳೂರಿಗೆ ತೆರಳುವರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News