ಬಾಲಕಿ ನಾಪತ್ತೆ

Update: 2021-03-05 15:07 GMT

ಉಡುಪಿ, ಮಾ.5: ಬ್ರಹ್ಮಾವರ ತಾಲೂಕು ಬೈಕಾಡಿ ಗ್ರಾಮ ಗಾಂಧಿನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ರಮ್ಯಶ್ರೀ (17) ಎಂಬಾಕೆ ಮಾ.1ರಿಂದ ನಾಪತ್ತೆಯಾಗಿದ್ದಾರೆ.

ಚಹರೆ: 4 ಅಡಿ 7 ಇಂಚು ಎತ್ತರವಿದ್ದು, ಗೋಧಿ ಮೈಬಣ್ಣ, ಸಪೂರ ಶರೀರ ಹೊಂದಿದ್ದಾರೆ. ಕನ್ನಡ, ಇಂಗ್ಲೀಷ್ ಭಾಷೆ ಬಲ್ಲವರಾಗಿದ್ದು, ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2561044, ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂಖ್ಯೆ: 0820-2561966ನ್ನು ಸಂಪರ್ಕಿಸುವಂತೆ ಬ್ರಹ್ಮಾವರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News