ಉತ್ತರಪ್ರದೇಶ: ಅತ್ಯಾಚಾರ ಪ್ರಕರಣ ಹಿಂಪಡೆಯುವಂತೆ ಒತ್ತಡ; ಆತ್ಮಹತ್ಯೆಗೆ ಶರಣಾದ ಯುವತಿ

Update: 2021-03-05 16:31 GMT

ಸಂಭಲ್, ಮಾ. 3: ಅತ್ಯಾಚಾರ ಸಂತ್ರಸ್ತೆ 21 ವರ್ಷದ ಯುವತಿಯೋರ್ವಳು ತನ್ನ ದುಪ್ಪಟ್ಟ ಬಳಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರಪ್ರದೇಶದ ಸಂಭಲ್ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ

ಗುರುವಾರ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಲಾಗಿದೆ. ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ತನ್ನ ಮಗಳ ಮೇಲೆ ಅತ್ಯಾಚಾರ ಎಸಗಿದ ಆಶಿಶ್ ಎಂಬಾತನ ವಿರುದ್ಧ ಜನವರಿ 27ರಂದು ಬಹ್ಜೋಯಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧಿಸಿ ಜನವರಿ 3ರಂದು ಜೈಲಿಗೆ ಕಳುಹಿಸಲಾಗಿದೆ ಎಂದು ದೂರಿನಲ್ಲಿ ಯುವತಿಯ ತಂದೆ ಹೇಳಿದ್ದಾರೆ. ಪ್ರಕರಣ ಹಿಂಪಡೆಯುವಂತೆ ಆರೋಪಿಯ ಕುಟುಂಬ ತನ್ನ ಪುತ್ರಿಗೆ ಒತ್ತಡ ಹೇರಿತ್ತು. ಇದರಿಂದ ಆಕೆ ಆತಂಕಕ್ಕೆ ಒಳಗಾಗಿದ್ದಳು ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ. ದೂರಿನ ಆಧಾರದಲ್ಲಿ ಆರೋಪಿಯ ತಾಯಿ, ತಂದೆ ಹಾಗೂ ಸಹೋದರನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಲ್ಲದೆ, ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News