ತಮಿಳುನಾಡು ಚುನಾವಣೆ: ಸಿಎಂ ಪಳನಿಸ್ವಾಮಿ ಎಡಪಾಡಿಯಿಂದ ಸ್ಪರ್ಧೆ

Update: 2021-03-05 16:39 GMT

ಚೆನ್ನೈ, ಮಾ.5: ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪ್ರಥಮ ಪಟ್ಟಿಯನ್ನು ಆಡಳಿತಾರೂಢ ಎಐಎಡಿಎಂಕೆ ಶುಕ್ರವಾರ ಬಿಡುಗಡೆಗೊಳಿಸಿದ್ದು ಇದರಲ್ಲಿ ಮುಖ್ಯಮಂತ್ರಿ ಇಕೆ ಪಳನಿಸ್ವಾಮಿ ಮತ್ತು ಉಪಮುಖ್ಯಮಂತ್ರಿ ಒ ಪನೀರ್‌ಸೆಲ್ವಂ ಹೆಸರು ಸೇರಿದೆ. ಪಳನಿಸ್ವಾಮಿ ಸೇಲಂ ಜಿಲ್ಲೆಯ ಎಡಪಾಡಿ ವಿಧಾನಸಭಾ ಕ್ಷೇತ್ರದಿಂದ, ಪನೀರ್‌ಸೆಲ್ವಂ ಬೋಡಿನಾಯಕನೂರು ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ. 234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಗೆ ಎಪ್ರಿಲ್ 6ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು ಮೇ 2ರಂದು ಮತ ಎಣಿಕೆ ನಡೆಯಲಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News