ಕನ್ನಡ ಸಾಹಿತ್ಯ ಪರಿಷತ್ತು ಪರೀಕ್ಷೆಗಳ ಫಲಿತಾಂಶ ಪ್ರಕಟ

Update: 2021-03-05 16:56 GMT

ಬೆಂಗಳೂರು, ಮಾ.5: ಕನ್ನಡ ಸಾಹಿತ್ಯ ಪರಿಷತ್ತು 2020-21ನೇ ಸಾಲಿನಲ್ಲಿ ನಡೆಸಿದ ಕನ್ನಡ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಲಾಗಿದ್ದು, ರಾಜ್ಯದ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಫಲಿತಾಂಶದ ಪಟ್ಟಿಯನ್ನು ಕಳುಹಿಸಿ ಕೊಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿ ಡಾ.ಪದ್ಮರಾಜ ದಂಡಾವತಿ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಫಲಿತಾಂಶವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಕಟಣಾ ಫಲಕದಲ್ಲಿ ಮತ್ತು ಅಂತರ್ಜಾಲದ ವೆಬ್ ಸೈಟ್ www.kasapa.in ನಲ್ಲಿ ಪ್ರಕಟಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಅಂಕಪಟ್ಟಿ ಮತ್ತು ಪ್ರಮಾಣ ಪತ್ರಗಳನ್ನು ಶೀಘ್ರದಲ್ಲಿಯೇ ಅಭ್ಯರ್ಥಿಗಳಿಗೆ ಕಳುಹಿಸಿಕೊಡಲಾಗುವುದು. ಹಾಗೂ ಮರುಮೌಲ್ಯಮಾಪನಕ್ಕೆ ಅಂಕಪಟ್ಟಿಗಳು ಕಳುಹಿಸಿದ ದಿನಾಂಕದಿಂದ ಒಂದು ತಿಂಗಳೊಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂ.26623584 ಸಂಪರ್ಕಿಸಲು ಕೋರಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News